Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮೀನು ವಿಚಾರವಾಗಿ ಅಣ್ಣ-ತಮ್ಮನ ನಡುವೆ ಜಗಳ: ತಮ್ಮನ ಕೊಲೆಯಲ್ಲಿ ಅಂತ್ಯ

Advertisement

ಬೆಳಗಾವಿ: ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿದೆ. ಜಮೀನು ವಿಚಾರವಾಗಿ ಅಣ್ಣ-ತಮ್ಮನ ನಡುವೆ ಆರಂಭವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಸಂಭವಿಸಿದೆ.

ಜಮೀನು ಮಾರಾಟ ಮಾಡುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ, ಅಣ್ಣನೇ ತನ್ನ ತಮ್ಮನನ್ನು ಕಲ್ಲಿನಿಂದ ಜಜ್ಜಿ, ಕುತ್ತಿಗೆ ಹಿಸುಕಿ ಭೀಕರವಾಗಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಬೆಳಗಾವಿ ಎಸ್ ಪಿ ಕೆ ರಾಮರಾಜನ್ ಮಹಿತಿ ನೀಡಿದ್ದಾರೆ. ಮೃತನನ್ನು ರಾಜು ಸಿದ್ದಪ್ಪ ರುದ್ರಪ್ಪಗೋಳ (45) ಎಂದು ಗುರುತಿಸಲಾಗಿದ್ದು, ಆತನ ಅಣ್ಣ ಸಂಜು ರುದ್ರಪ್ಪಗೋಳ (49) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಘೋಡಗೇರಿ ಗ್ರಾಮದಲ್ಲಿರುವ ಮೂರು ಎಕರೆ ಜಮೀನು ಮಾರಾಟ ಮಾಡುವ ವಿಷಯದಲ್ಲಿ ಇಬ್ಬರ ನಡುವೆ ಗಲಾಟೆಯಾಗಿ ಮಾತಿನ ಚಕಮಕಿ ನಡೆದಿತ್ತು ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಂಜು ತಮ್ಮ ರಾಜುನನ್ನು ಕೊಲೆಗೈದಿದ್ದಾನೆ ಎಂದು ವಿವರಿಸಿದರು.

ಕೊಲೆಯಾದ ರಾಜು ಹಾಗೂ ಆರೋಪಿ ಸಂಜು ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಪಾಳುಬಿದ್ದ ಕಟ್ಟಡವೊಂದರಲ್ಲಿ ವಾಸವಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಇವರಿಬ್ಬರು, ಪ್ರತಿದಿನ ರಾತ್ರಿ ಅಂಕಲಗಿ ಮಠದಲ್ಲಿ ಊಟ ಮುಗಿಸಿ ಅದೇ ಹಳೇ ಕಟ್ಟಡದಲ್ಲಿ ರಾತ್ರಿ ಕಳೆಯುತ್ತಿದ್ದರು.

ಘಟನೆಗೆ ಸಂಬಂಧಿಸಿದಂತೆ ಆರಂಭದಲ್ಲಿ ಎರಡೂ ಕುಟುಂಬಗಳಿಂದ ಯಾವುದೇ ದೂರು ದಾಖಲಾಗಿರಲಿಲ್ಲ. ಸದ್ಯ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಮೀನು ವಿಚಾರವಾಗಿ ಅಣ್ಣ-ತಮ್ಮನ ನಡುವೆ ಜಗಳ: ತಮ್ಮನ ಕೊಲೆಯಲ್ಲಿ ಅಂತ್ಯವಿವಾಹಿತ ಮಹಿಳೆಯನ್ನು ಓಡಿಸಿಕೊಂಡು ಹೋದ ಯುವಕ : ಯುವಕನ ಮನೆ ಧ್ವಂಸ ಮಾಡಿದ ಗುಂಪು ಅಕ್ರಮ ಪಡಿತರ ಮಾರಾಟ ಕಡಿವಾಣಕ್ಕೆ ಡಿಎಸ್ಎಸ್ ಅಗ್ರಹ!ಪೂಜಾರಿ ಗುರುಕುಲ ಶಾಲೆಯಲ್ಲಿ ಸರಸ್ವತಿ ಪೂಜೆ ಮತ್ತು ಅಕ್ಷರಾಭ್ಯಾಸ ಕಾರ್ಯಕ್ರಮಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ಕುಂದು ಕೊರತೆ  ಸಭೆಗ್ರಾಹಕರಿಗೆ ಶಾಕ್ : ಪ್ರತಿ ಕೆಜಿಗೆ ಅಕ್ಕಿ ದರ 13 ರೂ. ವರೆಗೆ ಹೆಚ್ಚಳ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಹೇರಲಾಗಿದ್ದ ನಿರ್ಬಂಧಗಳ ತೆರವು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಇಂದಿನಿಂದ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಆರಂಭ ಕೇವಲ 500 ರೂಪಾಯಿ ಸಾಲದ ವಿಚಾರಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ