LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇಂದು ತಾ.ಪಂ, ಜಿ.ಪಂ ಕ್ಷೇತ್ರ ಮೀಸಲು ಅಂತಿಮ ಅಧಿಸೂಚನೆ ಪ್ರಕಟ

Advertisement

ಬೆಂಗಳೂರು : ರಾಜ್ಯ ಸರಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದ್ದು, ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಬಹುತೇಕ ಶುಕ್ರವಾರ(ನ.20) ಪ್ರಕಟವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

 ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 30 ಜಿಲ್ಲೆಗಳ 1101 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿಗೆ ಹಾಗೂ 234 ತಾಲೂಕು ಪಂಚಾಯತಿಗಳ 3580 ಸದಸ್ಯ ಸ್ಥಾನಕ್ಕೆ ಸಂಬಂಧಿಸಿದಂತೆ ಮೀಸಲು ನಿಗದಿ ಮಾಡಿ ಅಕ್ಟೋಬರ್ 9ರಂದು ಕರಡು ಅಧಿಸೂಚನೆ ಹೊರಡಿಸಲಾಗಿತ್ತು ಎಂದು ತಿಳಿಸಿದರು.

ಇದಾದ ನಂತರ, ಅ.19ರವರೆಗೆ ನಿಯಮಾನುಸಾರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅದರಂತೆ ಒಟ್ಟು 2900ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು.

ಗ್ರಾಮ ಪಂಚಾಯತಿ ಇಲಾಖೆಯ ಅಧಿಕಾರಿಗಳು ನಿಯಮಾನುಸಾರ ಈ ಎಲ್ಲ ಆಕ್ಷೇಪಣೆಗಳನ್ನೂ ಪರಿಶೀಲಿಸಿ ಕ್ಷೇತ್ರಗಳ ಅಂತಿಮ ಅಧಿಸೂಚನೆ ಸಿದ್ಧಪಡಿಸಿದ್ದು, ನ.20ರಂದು ಅಧಿಸೂಚನೆ ಪ್ರಕಟಿಸಲಾಗುವುದು ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST