ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಕೊನೆಗೂ ಜೀವ ಬಂದಿದೆ.
ಸಂಪುಟ ಸರ್ಜರಿ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಇಂದು ರಾತ್ರಿ ದೇಶದ ರಾಜಧಾನಿ ದೆಹಲಿಗೆ ತಲುಪಲಿದ್ದಾರೆ.
ನಾಳೆ ಮೊದಲ ಹಂತದ ಮಹತ್ವದ ಸಭೆ
ನಾಳೆ (ಗುರುವಾರ) ಎಐಸಿಸಿ ನಾಯಕರು ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಮೊದಲ ಹಂತದ ಮಹತ್ವದ ಮಾತುಕತೆ ನಡೆಯಲಿದೆ.
ಹೈಕಮಾಂಡ್ ನಾಯಕರು ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿ, ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಹಾಗೂ ಪ್ರಾದೇಶಿಕ, ಜಾತಿಸೂತ್ರಗಳ ಸಮತೋಲನದ ಕುರಿತು ಸುದೀರ್ಘ ಚರ್ಚೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅನುಪಸ್ಥಿತಿಯಲ್ಲಿ ಸಭೆ ನಡೆಯಲಿದೆ.


