ಬೆಂಗಳೂರು: ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ರಾಜ್ಯದ ಯುವಜನತೆಗೆ ರಾಜ್ಯ ಸರ್ಕಾರವು ಜೂನ್ ತಿಂಗಳಿನಲ್ಲಿ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ.
ಕರ್ನಾಟಕದ 22 ಜಿಲ್ಲೆಗಳಲ್ಲಿ ಖಾಲಿ ಇರುವ ಬರೋಬ್ಬರಿ 572 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಅಧಿಕೃತವಾಗಿ ಅನುಮೋದನೆ ನೀಡಿದೆ.
ಆರ್ಥಿಕ ಇಲಾಖೆಯು ಆಡಳಿತಾತ್ಮಕ ಮತ್ತು ಆರ್ಥಿಕ ಅನುಮೋದನೆ ನೀಡಿರುವುದರಿಂದ, ಈ ನೇಮಕಾತಿ ಪ್ರಕ್ರಿಯೆಗೆ ಇದ್ದ ಅತಿ ದೊಡ್ಡ ಅಡ್ಡಿ ನಿವಾರಣೆಯಾಗಿದೆ.
ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗುತ್ತಿದ್ದಂತೆಯೇ, ಅರ್ಜಿ ಸಲ್ಲಿಕೆಯ ದಿನಾಂಕ, ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಪರೀಕ್ಷಾ ವಿಧಾನಗಳ ಕಂಪ್ಲೀಟ್ ಗೈಡ್‌ಲೈನ್ಸ್ ಒಳಗೊಂಡ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.
ಆರ್ಥಿಕ ಇಲಾಖೆಯ ಒಪ್ಪಿಗೆ ಸಿಗುತ್ತಿದ್ದಂತೆಯೇ ಅಲರ್ಟ್ ಆಗಿರುವ ಕಂದಾಯ ಇಲಾಖೆಯು, ಹುದ್ದೆಗಳ ಭರ್ತಿಗೆ ತಕ್ಷಣವೇ ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ 22 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ (DCs) ಖಡಕ್ ಪತ್ರ ಬರೆದಿದೆ. ಇದರಿಂದಾಗಿ ಶೀಘ್ರದಲ್ಲೇ ಈ ಹುದ್ದೆಗಳಿಗೆ ಬೃಹತ್ ಅಧಿಸೂಚನೆ (Notification) ಹೊರಬೀಳೋದು ಗ್ಯಾರಂಟಿ ಆಗಿದೆ


