Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಬ್ಬಿನ ಬೆಳೆಗಾರರಿಗೆ 300 ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ

Advertisement
ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ 50 ರೂಪಾಯಿ ಆರ್ಥಿಕ ನೆರವಿನ ಮೊತ್ತವಾಗಿ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಕಳೆದ ನವೆಂಬರ್‌ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಟನ್‌ ಕಬ್ಬಿಗೆ ಎಫ್‌ಆರ್‌ಪಿ ಮೇಲೆ 100 ರೂ. ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು.

ಈ 100 ರೂ. ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳು 50 ರೂ. ನೀಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಅದರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ 300 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಈ ನಿರ್ಧಾರದ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ:

💰 ಆರ್ಥಿಕ ನೆರವಿನ ವಿವರ

ಪ್ರತಿ ಟನ್‌ಗೆ 50 ರೂ.: ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಸರ್ಕಾರವು ಪ್ರತಿ ಟನ್‌ಗೆ 50 ರೂ. ಪ್ರೋತ್ಸಾಹಧನ ನೀಡುತ್ತಿದೆ.ನೇರ ನಗದು ವರ್ಗಾವಣೆ (DBT): ಈ ಹಣವು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆಯಾಗಲಿದೆ.

ಒಟ್ಟು ಮೊತ್ತ: ಪ್ರಸಕ್ತ ಹಂಗಾಮಿನಲ್ಲಿ ಸುಮಾರು 600 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದ್ದು, ಅದಕ್ಕೆ ಪೂರಕವಾಗಿ 300 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ