LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕೃಷ್ಣಾ ನದಿ ತೀರದ ಜನರಿಗೆ ಪ್ರವಾಹ ಭೀತಿ : 29,226 ಕ್ಯೂಸೆಕ್ ನೀರು ಬಿಡುಗಡೆ

Advertisement
ರಾಯಚೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆ ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ರಾಯಚೂರಿನಲ್ಲೂ ವರುಣನ ಆರ್ಭಟ ಜೋರಾಗಿದ್ದು ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ.

ಹೀಗಾಗಿ ಜಲಾಶಯದಿಂದ ಹೊರಹರಿವು ಕೂಡ ಹೆಚ್ಚಾಗಿದ್ದು ಕೃಷ್ಣಾ ನದಿಗೆ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ.

ಕೃಷ್ಣಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಕಾರಣ ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ ನದಿ ಪಾತ್ರದ ಜನರಿಗೆ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

ಈ ಭಾಗದಲ್ಲಿ ವಾಸಿಸುವ ಯಾರೊಬ್ಬರೂ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.
ನಾರಾಯಣಪುರ ಜಲಾಶಯದಿಂದ 29,226 ಕ್ಯೂಸೆಕ್‌ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ. ಇನ್ನು ಜಲಾಶಯಕ್ಕೆ 30,000 ಕ್ಯೂಸೆಕ್ ಒಳಹರಿವು ಇದ್ದು, 85.41% ರಷ್ಟು ಭರ್ತಿಯಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ