Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನಪದ ಗಾಯಕ ಮ್ಯೂಸಿಕ್ ಮೈಲಾರಿಗೆ ಜಾಮೀನು ಮಂಜೂರು

Advertisement

ಬಾಗಲಕೋಟೆ : ಪೊಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿಗೆ ಜಾಮೀನು ಲಭಿಸಿದೆ.


ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಅವರಿಗೆ ಬಾಗಲಕೋಟೆ ನ್ಯಾಯಾಲಯದ ನ್ಯಾಯಾಧೀಶೆ ಪ್ರೀತಿ ಸಾಗರ್ ಜೋಷಿ ಕೆಲವು ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದ್ದಾರೆ.

ಒಂದು ಲಕ್ಷ ರೂಪಾಯಿ ಶ್ಯೂರಿಟಿ ಬಾಂಡ್ ಸಲ್ಲಿಕೆ, ಪ್ರಾಸಿಕ್ಯೂಷನ್ ಮೇಲೆ ಪ್ರಭಾವ ಬೀರುವಂತಿಲ್ಲ ಮತ್ತು ಅಪರಾಧ ಮರುಕಳಿಸಬಾರದು ಎಂಬ ನಿಯಮಗಳನ್ನು, ಷರತ್ತುಗಳನ್ನು ಸ್ಪಷ್ಟಪಡಿಸಿ ಜಾಮೀನು ನೀಡಲಾಗಿದೆ. ಕಳೆದ ಡಿಸೆಂಬರ್‌ನಿಂದ ಜೈಲಿನಲ್ಲಿದ್ದ ಮೈಲಾರಿಗೆ ಈಗ ಬಿಡುಗಡೆ ಸಾಧ್ಯವಾಗಿದೆ.

ಬೆಳಗಾವಿ ಜಿಲ್ಲೆಯ ಗ್ರಾಮದಲ್ಲಿ ನಡೆದ ಹನುಮಂತ ದೇವರ ಓಕುಳಿ ಹಬ್ಬದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನೃತ್ಯಕ್ಕೆ ಬಂದಿದ್ದ ಬಾಲಕಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದರೆಂದು ಆರೋಪಿಸಲಾಗಿತ್ತು. ವಿಡಿಯೋ ಚಿತ್ರೀಕರಣದ ಗಂಭೀರ ಆರೋಪವೂ ಕೇಳಿಬಂದಿದ್ದು, ಒಟ್ಟು ಏಳು ಮಂದಿಯ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ