Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯಿಂದಲೇ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ : ಈಶ್ವರ ಖಂಡ್ರೆ 

Advertisement
ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು 'ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ' ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.

ಈ ಸಂಬಂಧ ಮಾಧ್ಯ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ