ಮೈಸೂರು : ಸ್ಟಿಂಗ್ ಆಪರೇಷನ್ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ಹಿಂದೇಟು ಹಾಕಿದ್ದಾರೆ. ಅದಕ್ಕೆ ಸ್ಟೇ ಕೊಟ್ಟಿದ್ದಾರೆ, ಅದರ ಬಗ್ಗೆ ಇನ್ನೇನು ಮಾತನಾಡಲಿ ಎಂದು ಪ್ರಶ್ನಿಸಿದ್ದಾರೆ.
ರಮೇಶ್ ಜಾರಕಿಹೊಳಿ ಭೇಟಿ ವಿಚಾರವಾಗಿಯೂ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅವರು ಬಂದಿದ್ದು ಉಭಯ ಕುಶಲೋಪರಿ ವಿಚಾರಿಸಲು. ರಮೇಶ್ ಬಂದು ಊಟ ಮಾಡಿದ್ರು ಹೋದ್ರು ಎಂದು ತಿಳಿಸಿದ್ದಾರೆ.
ಮೈಸೂರಿನ ಟಿ.ಕೆ.ಲೇಔಟ್ನಲ್ಲಿರುವ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದ ರಮೇಶ್ ಜಾರಕಿಹೊಳಿ, ಮಾಜಿ ಸಿಎಂ ಜೊತೆ ಕೆಲ ಕಾಲ ಮಾತುಕತೆ ನಡೆಸಿದ್ದರು.


