LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಿವಶ 

Advertisement

ಬೆಂಗಳೂರು: ಕರ್ನಾಟಕದ ಮಾಜಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಮತ್ತು ತಿಪಟೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದ ಹಿರಿಯ ರಾಜಕಾರಣಿ ಬಿ.ಸಿ. ನಾಗೇಶ್ (67) ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕಳೆದ ಒಂದು ವರ್ಷದಿಂದ ಮೆದುಳಿನ ಗಡ್ಡೆ (ಬ್ರೈನ್ ಟ್ಯೂಮರ್) ಸಮಸ್ಯೆಯಿಂದ ಬಳಲುತ್ತಿದ್ದ ಅವರು ಎರಡು ಬಾರಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು.

ರಾಜಧಾನಿ ಬೆಂಗಳೂರಿನಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

 ಮೃತರು ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದು, ಅವರ ಹುಟ್ಟೂರಾದ ತಿಪಟೂರಿನಲ್ಲಿ ಇಂದು ಸಾರ್ವಜನಿಕ ಅಂತಿಮ ದರ್ಶನದ ಬಳಿಕ ವಿಧಿ-ವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

1959ರ ಜುಲೈ 1ರಂದು ಜನಿಸಿದ ಬಿ.ಸಿ. ನಾಗೇಶ್ ಅವರು ವಿದ್ಯಾರ್ಥಿ ದೆಸೆಯಲ್ಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸಂಘಟನೆಯ ಮೂಲಕ ಸಾಮಾಜಿಕ ಮತ್ತು ಸಾರ್ವಜನಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪೂರ್ಣಾವಧಿ ಪ್ರಚಾರಕರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಇವರು, 1984ರಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST