LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರು

Advertisement

ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಸಮೀಪ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ರಮಾನಾಥ ರೈ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಾರ್ಕಳ-ಮೂಡುಬಿದಿರೆ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನಗಳಿಗೆ ಏಕಮುಖ (ಒನ್ ವೇ) ಸಂಚಾರ ಕಲ್ಪಿಸಲಾಗಿತ್ತು.

 ರಮಾನಾಥ ರೈ ಅವರು ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ಮೂಡುಬಿದಿರೆ ಮಾರ್ಗವಾಗಿ ಎದುರಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರು ತಕ್ಷಣ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ತೀವ್ರ ಪೆಟ್ಟು ತಿಂದಿದ್ದ ಕಾರು ಚಾಲಕ ಹಾಗೂ ಸಣ್ಣಪುಟ್ಟ ಗಾಯಗಳಾಗಿದ್ದ ರಮಾನಾಥ ರೈ ಅವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮ