LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮಾಜಿ ಸಚಿವ ಕೆ.ಶಿವನಗೌಡ ನಾಯಕ್ ಕೊರಳಲ್ಲಿ ನವಿಲುಗರಿ ಹಾರ

Advertisement
ರಾಯಚೂರು : ಮಾಜಿ ಸಚಿವ, ದೇವದುರ್ಗದ ಮಾಜಿ ಶಾಸಕ ಕೆ.ಶಿವನಗೌಡ ನಾಯಕ್ ಈಗ ನವಿಲುಗರಿ ಹಾರ ವಿವಾದದಲ್ಲಿ ಸಿಲುಕಿದ್ದಾರೆ.

ಜುಲೈ 14 ರಂದು ಕೆ.ಶಿವನಗೌಡ ನಾಯಕ್ ಹುಟ್ಟುಹಬ್ಬವಿತ್ತು. ಸಂಭ್ರಮದ ವೇಳೆ ನವಿಲುಗರಿಯ ಹಾರ ಧರಿಸಿದ ಫೋಟೋಗಳು ಎಲ್ಲೆಡೆ ವೈರಲ್ ಆಗಿವೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಶಿವನಗೌಡ ನಾಯಕ್ ವಿರುದ್ಧ ದೂರು ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಕಲ್ಲಹಳ್ಳಿ ಇಮೇಲ್ ಮೂಲಕ ದೂರು ನೀಡಿದ್ದು, 'ರಾಷ್ಟ್ರಪಕ್ಷಿ ನವಿಲಿನ ಗರಿಯಿಂದ ತಯಾರಿಸಿದ ಹಾರವನ್ನ ಧರಿಸಿ ಸಾರ್ವಜನಿಕವಾಗಿ ಪ್ರದರ್ಶನ ಮಾಡಲಾಗಿದೆ. ಇದರಿಂದ ಸಾರ್ವಜನಿಕರಲ್ಲಿ ತಪ್ಪು ಸಂದೇಶ ಮೂಡಿ ಇತರರು ಕೂಡ ಪ್ರೇರಿತರಾಗುವ ಅಪಾಯವಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನ ಮಾಜಿ ಸಚಿವ ಶಿವನಗೌಡ ನಾಯಕ್ ಉಲ್ಲಂಘಿಸಿದ್ದಾರೆ' ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ನವಿಲು ಗರಿಯ ಮೂಲ ಪತ್ತೆ ಹಚ್ಚಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ