ಬೆಂಗಳೂರು: ಮಾಜಿ ಸಚಿವ ವೆಂಕಟರಮಣಪ್ಪ(80) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ವೆಂಕಟರಮಣಪ್ಪ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟರಮಣಪ್ಪ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ
ನಾಲ್ಕು ಬಾರಿ ತುಮಕೂರು ಜಿಲ್ಲೆಯ ಪಾವಗಡ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ವೆಂಕಟರಮಣ ಪುತ್ರ ವೆಂಕಟೇಶ್ ಪಾವಗಡ ಕ್ಷೇತ್ರದ ಶಾಸಕರಾಗಿದ್ದಾರೆ.

