LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದೀರ್ಘಕಾಲೀನ ಜ್ವಲಂತ ಸಮಸ್ಯೆಗಳತ್ತ ಸಿಎಂ ಗಮನಹರಿಸಲಿ: ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ

Advertisement
ಪಾವಗಡ: ತುಮಕೂರು ಜಿಲ್ಲಾ ಪಾವಗಡ ತಾಲ್ಲೂಕಿನ. ಜೆಡಿಎಸ್ ಪಕ್ಷದ ಮಾಜಿ ಶಾಸಕ ಕೆಎಂ ತಿಮ್ಮರಾಯಪ್ಪ ಹಾಗೂ ಪಕ್ಷದ ಪದಾಧಿಕಾರಿಗಳು ವತಿಯಿಂದ ಪಾವಗಡದಲ್ಲಿರುವ ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ದಿನಾಂಕ 19/07/25 ಶನಿವಾರ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆಯಲ್ಲಿ ಜುಲೈ 21 ರಂದು ಪಾವಗಡಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದು, ಈ ಸಂದರ್ಭ ಪಾವಗಡ ತಾಲೂಕಿನ ದೀರ್ಘಕಾಲೀನ ಮತ್ತು ಜ್ವಲಂತ ಸಮಸ್ಯೆಗಳತ್ತ ಗಮನಹರಿಸಬೇಕೆಂದು ಜೆಡಿಎಸ್‌ನ ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ ಒತ್ತಾಯಿಸಿದ್ದಾರೆ.

ಪಾವಗಡ ತಾಲೂಕಿಗೆ ತುಂಗಭದ್ರ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಎತ್ತಿನಹೊಳೆ ಯೋಜನೆಯಲ್ಲಿ ಪಾವಗಡ ತಾಲೂಕು ಕೈ ಬಿದ್ದಿದೆ. ಮಧುಗಿರಿ ಹಾಗೂ ಕೊರಟಗೆರೆಗೆ 400 ಕೋಟಿ ರೂ. ಮೀಸಲಿಡಲಾಗಿದೆ, ಬರಪೀಡಿತ ಮತ್ತು ಗಡಿಭಾಗವಾಗಿರುವ ಪಾವಗಡಕ್ಕೆ ಅನ್ಯಾಯವಾಗಿದೆ. ಈ ಭಾಗದ ರೈತರ ಬದುಕು ಉಳಿಸಬೇಕಾದರೆ ತಕ್ಷಣ ಹಣ ಬಿಡುಗಡೆ ಮಾಡಬೇಕು,” ಎಂದು ಆಗ್ರಹಿಸಿದರು.

ಸೋಲಾರ್ ಸಮಸ್ಯೆ ಬಗೆಹರಿಸಲು ಮುಂದಾಗಿ: 2014ರಿಂದ ತಿರುಮಣಿ ಮತ್ತು ವಳ್ಳೂರು ಗ್ರಾಮಗಳಲ್ಲಿ ಸ್ಥಾಪಿತವಾದ ಸೋಲಾರ್ ಪಾರ್ಕ್ ಬಗ್ಗೆ ಮಾತನಾಡಿದ ಅವರು, “ಅಲ್ಲಿನ ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಇನ್ನೂ ಬಗೆಹರಿಯಿಲ್ಲ. 8 ಸಾವಿರ ಉದ್ಯೋಗಗಳ ಭರವಸೆ ಇತ್ತು, ಆದರೆ ಇನ್ನೂ ಕಾರ್ಯಗತವಾಗಿಲ್ಲ,” ಎಂದು ಚುಚ್ಚಿದರು.

ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ನಿಂತುಹೋಗಿರುವ ಬಗ್ಗೆ ಗಮನ ಸೆಳೆದ ಅವರು, “ಗ್ರಾಮೀಣ ಜನತೆಗೆ ಪಕ್ಷಾತೀತವಾಗಿ ಸೌಲಭ್ಯ ನೀಡಬೇಕು. ಕುಡಿಯುವ ನೀರು ತಕ್ಷಣ ಒದಗಿಸಲು ಕ್ರಮ ತೆಗೆದುಕೊಳ್ಳಬೇಕು,” ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಎನ್.ಎ. ಈರಣ್ಣ, ಗೌರವಾಧ್ಯಕ್ಷ ರಾಜಶೇಖರಪ್ಪ, ಕಾರ್ಯದರ್ಶಿಗಳು ಸೊಗಡು ವೆಂಕಟೇಶ್, ಮುಖಂಡರಾದ ಗಂಗಾಧರ ನಾಯ್ಡು, ಮನು ಮಹೇಶ್, ಯುವ ಘಟಕದ ಭರತ್, ಗಗನ್ ರಾಜ್, ಕಾವಲಗೇರಿ ರಾಮಾಂಜಿ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ವರದಿ: ಶಿವಾನಂದ ಪಾವಗಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ