Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಶಾಸಕರು, ಸಂಸದರಿಂದ ರಾಷ್ಟ್ರೀಯ ಲಾಂಛನ, ಧ್ವಜ ಬಳಕೆ ದುರದೃಷ್ಟಕರ : ಹೈಕೋರ್ಟ್

Advertisement
ಬೆಂಗಳೂರುಮಾಜಿ ಶಾಸಕರು, ಸಂಸದರು ರಾಷ್ಟ್ರೀಯ ಲಾಂಛನಗಳು ಮತ್ತು ಧ್ವಜಗಳನ್ನು ತಮ್ಮ ಲೆಟರ್‌ಹೆಡ್‌ ಹಾಗೂ ವಾಹನಗಳಿಗೆ ಬಳಕೆ ಮಾಡುತ್ತಿರುವುದು ನಿಜಕ್ಕೂ ದುರುದೃಷ್ಠಕರ ಎಂದಿರುವ ಹೈಕೋರ್ಟ್‌, ರಾಷ್ಟ್ರೀಯ ಲಾಂಛನಗಳ ಬಳಕೆಗೆ ಸಂಬಂಧಿಸಿದಂತೆ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ರಾಷ್ಟ್ರೀಯ ಲಾಂಚನಗಳು ಮತ್ತು ಧ್ವಜದ ಹೆಸರುಗಳನ್ನು ಬಳಕೆ ತಡೆಯಲು ಕೋರಿ ಹೈಕೋರ್ಟ್‌ ಕಾನೂನು ಸೇವೆಗಳ ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಧಿಕಾರದಲ್ಲಿಲ್ಲದಿದ್ದರೂ, ಮಾಜಿ ಶಾಸಕರು ಮತ್ತು ಸಂಸದರು ರಾಷ್ಟ್ರೀಯ ಲಾಂಛನ ಮತ್ತು ಧ್ವಜಗಳನ್ನು ಲೆಟರ್​​ಹೆಡ್‌ ಮತ್ತು ವಾಹನಗಳ ಮೇಲೆ ಬಳಕೆ ಮಾಡುತ್ತಿರುವುದು ನಿಜಕ್ಕೂ ದುರದೃಷ್ಟಕರ. ಇದೊಂದು ತಪ್ಪು ಸಂದೇಶ ನೀಡುತ್ತಿದ್ದು, ಇದನ್ನು ತಡೆಯಬೇಕಾಗಿದೆ. ಕಾನೂನು ಜಾರಿ ಸಂಸ್ಥೆಗಳು ತಕ್ಷಣ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

ಸಾರ್ವಜನಿಕ ಸ್ಥಳಗಳು ಮತ್ತು ವಾಹನಗಳಲ್ಲಿ ರಾಷ್ಟ್ರೀಯ ಚಿಹ್ನೆಗಳು ಮತ್ತು ಲಾಂಛನಗಳನ್ನು ಅನಧಿಕೃತ ಬಳಕೆ ಮತ್ತು ದುರುಪಯೋಗ ತಡೆಗಟ್ಟಲು 1950ರ ಲಾಂಛನಗಳು ಮತ್ತು ಹೆಸರುಗಳ (ಅನುಚಿತ ಬಳಕೆ ತಡೆಗಟ್ಟುವಿಕೆ) ಕಾಯಿದೆ ಮತ್ತು 1982ರ ಲಾಂಛನಗಳು ಮತ್ತು ಹೆಸರುಗಳು (ಅನುಚಿತ ಬಳಕೆ ತಡೆಗಟ್ಟುವಿಕೆ) ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅಲ್ಲದೆ, ಭಾರತದ ರಾಜ್ಯ ಲಾಂಛನ (ಅನುಚಿತ ಬಳಕೆ ನಿಷೇಧ) ಕಾಯ್ದೆ, 2005, ಮತ್ತು ಭಾರತದ ರಾಜ್ಯ ಲಾಂಛನ (ಬಳಕೆ ನಿಯಂತ್ರಣ) ನಿಯಮಗಳು, 2007, 2010ರ ನಿಯಮಗಳು ಮತ್ತು ಕೇಂದ್ರ ಮೋಟಾರು ವಾಹನ ನಿಯಮಗಳು, 1989ರ ಎಲ್ಲ ಕಾಯಿದೆಗಳಲ್ಲಿ ಅನ್ವಯವಾಗುವ ನಿಯಮಗಳು, ಮತ್ತು ಕರ್ನಾಟಕ ಮೋಟಾರು ವಾಹನ ನಿಯಮಗಳು, 1989, ವಿಶೇಷವಾಗಿ 145-A (ರಾಜ್ಯ ಲಾಂಛನದ ಅನುಚಿತ ಬಳಕೆಯನ್ನು ನಿಷೇಧಿಸುವುದು) ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಕೋರ್ಟ್​ ಸೂಚಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ