ಬೆಂಗಳೂರು: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ಸಂಜೆ 4 ಗಂಟೆಗೆ ನಿಧನರಾಗಿದ್ದಾರೆ.
ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು.
ಜುಲೈ 15ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚೆನ್ನಮ್ಮಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪುತ್ರರಾದ ಮಾಜಿ ಸಚಿವ ಹೆಚ್‌ಡಿ ರೇವಣ್ಣ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ದೌಡಾಯಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ಸಹ ಭೇಟಿ ನೀಡಿ ಚೆನ್ನಮ್ಮಾ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.


