ಹುಬ್ಬಳ್ಳಿ: ಅಕ್ರಮವಾಗಿ ದೇಶದ ಒಳಕ್ಕೆ ನುಗ್ಗಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳನ್ನು ಹುಬ್ಬಳ್ಳಿಯ ರೈಲ್ವೆ ರಕ್ಷಾಣ ಪಡೆ (ಆರ್ ಪಿಎಫ್) ಸಿಬ್ಬಂದಿಗಳು ಬಂಧಿಸಿದ್ದಾರೆ.
ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ನಾಲ್ವರು ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ.
ಬಂಧಿತರ ಬಳಿ ಯಾವುದೇ ಗುರುತಿನ ದಾಖಲೆಗಳಿರಲಿಲ್ಲ. ಆದಾಗ್ಯೂ ನಾಲ್ವರು ವಿದೇಶಿಗರು ರೈಲಿನಲ್ಲಿ ಪ್ರಯಾಣ ಮಾಡಿ ಹುಬ್ಬಳ್ಳಿವರೆಗೆ ಬಂದಿದ್ದರು.
ಸದ್ಯ ನಾಲ್ವರನ್ನು ವಶಕ್ಕೆ ಪಡೆದಿರುವ ಆರ್‌ಪಿಎಫ್ ಸಿಬ್ಬಂದಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ-ಗದಗ ರಸ್ತೆಯಲ್ಲಿರುವ ಆರ್‌ಪಿಎಫ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ಮುಂದುವರಿದಿದೆ.

