Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಕುಂಭಮೇಳದ ಕಾಲ್ತುಳಿತದಲ್ಲಿ ಬೆಳಗಾವಿ ಇಬ್ಬರು ಸೇರಿ ನಾಲ್ವರು ಸಾವು 

Advertisement
ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ ಘಟನೆ ನಡೆದಿದ್ದು, ಈ ಒಂದು ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿತ್ತು. ಇದೀಗ ಇದೆ ಬೆಳಗಾವಿ ಜಿಲ್ಲೆಯ ಇನ್ನಿಬ್ಬರು ಸಾವನ್ನಪ್ಪಿದ್ದು ಆ ಮೂಲಕ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ.

ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ಬಂದಿದ್ದು, ಶಿವಾಜಿನಗರದ ನಿವಾಸಿ ಮಹಾದೇವಿ ಹನುಮಂತ ಬಾಗನೂರು ಹಾಗೂ ಶೆಟ್ಟಿಗಲ್ಲಿಯ ಅರುಣ್ ಕೋಪರ್ಡೆ ಸಾವನಪ್ಪಿದ್ದಾರೆ.

ಮಹಾದೇವಿ ಅವರು ಭಾನುವಾರ 30 ಜನರ ಜೊತೆಗೆ ಮಹಾ ಕುಂಭಮೇಳಕ್ಕೆ ತೆರಳಿದ್ದರು ಎನ್ನಲಾಗಿದೆ. ಇನ್ನು ಅರುಣ್ ಪತ್ನಿಯ ಜೊತೆಗೆ ಪ್ರಯಾಗ್ ರಾಜ್ ಗೆ ತೆರಳಿದ್ದರು. ನಿನ್ನೆ ನಡೆದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗ್ಲೇ ಬೆಳಗಾವಿ ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಮೃತಾಪಟ್ಟಿದ್ದಾರೆ ಎಂದು ಮೃತರ ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ ನೀಡಿದ್ದಾರೆ.

ಕಲ್ತುಳಿತಕ್ಕೆ ಸಿಕ್ಕು ಗಾಯಗೊಂಡಿದ್ದ ಬೆಳಗಾವಿಯ ನಾಲ್ವರನ್ನೂ ಪ್ರಯಾಗ್‌ರಾಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ತಿಳಿಸಲಾಗಿದೆ.

ಜ್ಯೋತಿ ಅವರ ಮೊಬೈಲ್ ಬೆಳಿಗ್ಗೆಯಿಂದಲೂ ರಿಂಗ್ ಆಗುತ್ತಿತ್ತು. ಆದರೆ, ಅವರು ಕರೆ ಸ್ವೀಕರಿಸಿರಲಿಲ್ಲ. ಮೊಬೈಲ್‌ ರಿಂಗ್ ಆಗಿದ್ದರಿಂದ ಸುರಕ್ಷಿತವಾಗಿ ಇರಬಹುದು ಎಂದು ಕುಟುಂಬದವರು ಅಂದಾಜಿಸಿದ್ದರು.

ಮೂರು ದಿನಗಳ ಹಿಂದೆ ವಡಗಾವಿ ಪ್ರದೇಶದ 13 ಜನರು ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣ ಪ್ರಯಾಗ್‌ರಾಜ್‌ಗೆ ಪ್ರಯಾಣ ಬೆಳೆಸಿದ್ದರು.ಅಲ್ಲದೇ, ಸರೋಜಿನಿ ನಡುವಿನಹಳ್ಳಿ, ಕಾಂಚನ್‌ ಕೋಪಾರ್ಡೆ ಸೇರಿದಂತೆ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಅವರ ಕುಟುಂಬದವರಿಗೆ ಬಂದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ