Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃದ್ದ ಮಹಿಳೆಗೆ 50 ಲಕ್ಷ ರೂ ವಂಚನೆ ಆರೋಪ: ಮ್ಯಾನೇಜರ್ ಸೇರಿ ನಾಲ್ವರ ಬಂಧನ

Advertisement

ಬೆಂಗಳೂರು: ವೃದ್ಧ ಮಹಿಳೆಗೆ 50 ಲಕ್ಷ ರೂ. ವಂಚಿಸಿದ ಆರೋಪದ ಮೇಲೆ ಖಾಸಗಿ ಬ್ಯಾಂಕಿನ ಡೆಪ್ಯೂಟಿ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಗಿರಿನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.


ಗಿರಿನಗರದ ಇಂಡಸ್ ಇಂಡ್ ಬ್ಯಾಂಕಿನ ಡೆಪ್ಯೂಟಿ ಮ್ಯಾನೇಜರ್ ಮೇಘನಾ, ಆಕೆಯ ಪತಿ ಶಿವಪ್ರಸಾದ್, ಸ್ನೇಹಿತರಾದ ವರದರಾಜು ಹಾಗೂ ಅನ್ವರ್ ಗೌಸ್ ಎಂಬುವವದನ್ನು ಬಂಧಿಸಿ ರೂ.50 ಲಕ್ಷ ಜಪ್ತಿ ಮಾಡಿದ್ದಾರೆ.


ಗಿರಿನಗರ ನಿವಾಸಿ ಸಾವಿತ್ರಮ್ಮ (76) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.


ಕಳೆದ ಜನವರಿಯಲ್ಲಿ ಸಾವಿತ್ರಮ್ಮ ಅವರ ಪತಿಗೆ ಸೇರಿದ್ದ ಚಾಮರಾಜಪೇಟೆಯ ಮನೆಯನ್ನು 1 ಕೋಟಿ ರೂ.ಗೆ ಮಾರಾಟ ಮಾಡಿದ್ದರು. ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಿದ್ದರು.


ಡೆಪ್ಯೂಟಿ ಮ್ಯಾನೇಜರ್ ಮೇಘನಾ ನಿಮ್ಮ ಎರಡು ಎಫ್ಡಿ ಬಾಂಡ್ಗಳ ಅವಧಿ ಮುಗಿದಿದೆ. ಇದನ್ನು ಹಿಂಪಡೆದು ಹೊಸದಾಗಿ ಎಫ್ಡಿ ಇರಿಸಿದರೆ, ಹೆಚ್ಚಿನ ಲಾಭಾಂಶ ಬರಲಿದೆ ಎಂದು ಸಾವಿತ್ರಮ್ಮಗೆ ತಿಳಿಸಿದ್ದಾರೆ. ಎಫ್ಡಿ ಬಾಂಡ್ ನವೀಕರಣಕ್ಕೆ ಅಗತ್ಯವಿರುವ ದಾಖಲೆಗಳು ಹಾಗೂ ಚೆಕ್ಗಳನ್ನು ಮನೆಗೆ ಬಂದು ಪಡೆದುಕೊಂಡು ಹೋಗುವುದಾಗಿ ತಿಳಿಸಿದ್ದಾರೆ.


ಫೆ.13ರಂದು ಸಾವಿತ್ರಮ್ಮ ಅವರ ಮನೆಗೆ ಭೇಟಿ ನೀಡಿದ್ದ ಮೇಘನಾ, ಎಫ್ಡಿ ಬಾಂಡ್ ನವೀಕರಿಸುವ ನೆಪದಲ್ಲಿ ತರಾತುರಿಯಲ್ಲಿ ಎರಡು ಚೆಕ್ಗಳನ್ನು ಪಡೆದು ಕೆಲ ದಾಖಲೆಗೆ ಸಹಿ ಪಡೆದಿದ್ದಾರೆ. ಬಳಿಕ ಹಳೆಯ ಎಫ್ಡಿ ಬಾಂಡ್ ಗಳನ್ನು ನವೀಕರಿಸಿ ಹೆಚ್ಚಿನ ಲಾಭಾಂಶ ಬರುವ ಎಫ್ಡಿಗೆ ಹಣ ಹೂಡುವುದಾಗಿ ತಿಳಿಸಿದ್ದಾರೆ.


ನಡುವೆ ವೃದ್ಧ ದಂಪತಿಯ ಮಗ ಮೊಬೈಲ್ ಫೋನ್ನಲ್ಲಿ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿದಾಗ 50 ಲಕ್ಷ ರೂ.ಗಳನ್ನು ಡೆಬಿಟ್ ಮಾಡಿರುವುದು ಕಂಡುಬಂದಿದೆ. ಬ್ಯಾಂಕ್ನಲ್ಲಿ ಪರಿಶೀಲಿಸಿದಾಗ, ಹಣವನ್ನು ಬೇರೆ ಖಾತೆಗೆ ವರ್ಗಾಯಿಸಿರುವುದು ಕಂಡು ಬಂದಿದೆ. ನಂತರ ಕುಟುಂಬವು ಪೊಲೀಸರಿಗೆ ದೂರು ನೀಡಿದೆ. ಕೂಲಂಕಷ ತನಿಖೆಯ ನಂತರ ಪೊಲೀಸರು ನಾಲ್ವರನ್ನು ಬಂಧಿಸಿದಾಗ ಅಪರಾಧ ಕೃತ್ಯ ಬೆಳಕಿಗೆ ಬಂದಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ