Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಕೊಡುಗೆ ಎಂಬುದು ಅಪಾಯಕಾರಿ : ಕಾಂಗ್ರೆಸ್ ಶಾಸಕ ದೇಶಪಾಂಡೆ ಅಸಮಾಧಾನ

Advertisement
ಕೊಪ್ಪಳ : ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್​​ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಬಗ್ಗೆ ಅಪಸ್ವರ ಕೇಳಿಬರುತ್ತಿವೆ. ಉಚಿತ ಪ್ರಯಾಣ ಮಾಡಿದ್ದರಿಂದ ಹೆಚ್ಚಾಗಿ ಮಹಿಳೆಯರು ಬಸ್​ನಲ್ಲಿ ಓಡಾಡುತ್ತಿದ್ದಾರೆ.

ಹೀಗಾಗಿ ಗಂಡು ಮಕ್ಕಳಿಗೆ ಜಾಗ ಇಲ್ಲದಂತಾಗಿದೆ. ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿವೆ ಅದನ್ನೇ ಆರ್​.ವಿ ದೇಶಪಾಂಡೆ ಪುನರುಚ್ಛರಿಸಿದ್ದಾರೆ.

ಕೊಪ್ಪಳದಲ್ಲಿಂದು ಮಾತನಾಡಿದ ದೇಶಪಾಂಡೆ, ಹೆಣ್ಮಕ್ಕಳು ಎಲ್ಲೊಂದರಲ್ಲಿ ಹೋಗುತ್ತಿದ್ದಾರೆ. ಹೀಗಾಗಿ ಗಂಡು ಮಕ್ಕಳಿಗೆ ಬಸ್​ನಲ್ಲಿ ಹತ್ತಲು ಆಗುತ್ತಿಲ್ಲ. ಪರಿಸ್ಥಿತಿ ಕೆಟ್ಟದಾಗಿದೆ ಎಂದರು.

ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಆರ್​ವಿ ದೇಶಪಾಂಡೆ ಹೇಳಿದ್ದಾರೆ. ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್​ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್