ಕಲಾದಗಿ : ಗ್ರಾಮದ ಉರ್ದು ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಶೂ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾವಿಕಾಸ ಯೋಜನೆಯಡಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸಲಾಯಿತ್ತು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಉರ್ದು ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಇಬ್ರಾಹಿಂ ಸೋಲ್ಜರ್ ವಿದ್ಯಾರ್ಥಿಗಳಿಗೆ ಉಚಿತ ಶೂಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೆ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯ ಹಸನ ಅಹಮದ್ ಪೆಂಡಾರಿ, ಶಾಲೆಯ ಮುಖ್ಯೋಪಾಧ್ಯಾಯರಾದ ಜಿ ಎಸ್ ನಾಗರಾಳ, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಕೊಠಡಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಮುಖದಲ್ಲಿ ಸಂತಸ ಮನೆಮಾಡಿತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಉಚಿತವಾಗಿ ಶೂಗಳನ್ನು ವಿತರಿಸುವ ಮೂಲಕ ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಯಿತು.
ವಿದ್ಯಾರ್ಥಿಗಳ ಶಿಕ್ಷಣದ ಜೊತೆಗೆ ಅವರ ಅಗತ್ಯತೆಗಳಿಗೂ ಸ್ಪಂದಿಸುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಉತ್ತಮ ಸಂದೇಶವನ್ನು ಮೂಡಿಸುತ್ತವೆ.
ವರದಿ : ಬಸವರಾಜ ಪೂಜಾರಿ


