ಬೆಂಗಳೂರು: ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡ ಅವರ ಫ್ಲ್ಯಾಟ್ನಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ (R.R. Nagar) ಅಪಾರ್ಟ್ಮೆಂಟ್ನ ಫ್ಲ್ಯಾಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವೈಶಾಕ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ವೈಶಾಕ್ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವೈಶಾಕ್ ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಇನ್ನು ಪತ್ತೆಯಾಗಬೇಕಿದೆ.


