Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ಮುಂದೆ 'ವಂದೇ ಮಾತರಂ' ಗೀತೆಗೆ ಅವಮಾನ ಮಾಡಿದ್ದರೇ ಜೈಲೂಟ ಫಿಕ್ಸ್ : ಕಾಯ್ದೆಗೆ ಅನುಮೋದನೆ 

Advertisement

ನವದೆಹಲಿ: ರಾಷ್ಟ್ರಗೀತೆ 'ವಂದೇ ಮಾತರಂ' ಹಾಡುವುದಕ್ಕೆ ಅಡ್ಡಿಪಡಿಸುವುದು ಅಥವಾ ಗೀತೆಯನ್ನು ಅವಮಾನಿಸುವುದನ್ನು ಇನ್ಮುಂದೆ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲು ಕೇಂದ್ರ ಸಚಿವ ಸಂಪುಟವು ಮಹತ್ವದ ತೀರ್ಮಾನ ಕೈಗೊಂಡಿದೆ.

ಇದಕ್ಕಾಗಿ 'ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971' ಕ್ಕೆ ತಿದ್ದುಪಡಿ ತರುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ.

ಈವರೆಗೆ ರಾಷ್ಟ್ರಗೀತೆ 'ಜನ ಗಣ ಮನ', ರಾಷ್ಟ್ರಧ್ವಜ ಮತ್ತು ಸಂವಿಧಾನಕ್ಕೆ ಮಾತ್ರ ಇದ್ದ ಕಾನೂನಾತ್ಮಕ ರಕ್ಷಣೆಯನ್ನು ಈಗ 'ವಂದೇ ಮಾತರಂ'ಗೂ ವಿಸ್ತರಿಸಲಾಗುತ್ತಿದೆ. 

ರಾಷ್ಟ್ರಧ್ವಜ ಅಥವಾ ಸಂವಿಧಾನದ ಪ್ರತಿಯನ್ನು ಸುಡುವುದು, ವಿರೂಪಗೊಳಿಸುವುದು ಅಥವಾ ರಾಷ್ಟ್ರಗೀತೆ ಹಾಡುವಾಗ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ, ಅಥವಾ ಎರಡನ್ನೂ ವಿಧಿಸಬಹುದಾಗಿದೆ. 

ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ 3 ನಿಮಿಷ 10 ಸೆಕೆಂಡ್‌ಗಳ ಆರು ಚರಣಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಈಗಾಗಲೇ ಆದೇಶ ಹೊರಡಿಸಲಾಗಿದೆ.

ನಿಯಮಗಳೇನು?

ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ, ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯನ್ನು ಮೊದಲು ಹಾಡಬೇಕು ಅಥವಾ ನುಡಿಸಬೇಕು. ಗೀತೆ ಹಾಡುವ ಸಂದರ್ಭದಲ್ಲಿ ಸಭಿಕರೆಲ್ಲರೂ ಎದ್ದು ನಿಂತು ಗೌರವ ಸಲ್ಲಿಸುವುದು ಕಡ್ಡಾಯವಾಗಿದೆ.

ಸಂಸತ್ತಿನಲ್ಲಿ ಈ ತಿದ್ದುಪಡಿ ಅಂಗೀಕಾರಗೊಂಡ ನಂತರ, ವಂದೇ ಮಾತರಂಗೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶ ಸಿಗಲಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೆöÊ ಸೂಪರ್ ಕಿಂಗ್ಸ್ಗೆ ೨೩೦ ರನ್‌ಗಳ ಗೆಲುವಿನ ಗುರಿನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ