LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಯೋಗದಿಂದ ಆರೋಗ್ಯ, ಸಾತ್ವಿಕ ಜೀವನಕ್ಕೆ ಯೋಗ ಸಂಜೀವಿನಿ: ಸಂತೋಷ ಬಿ.ಜಿ. ಪಾಟೀಲ

Advertisement

ಭಾಲ್ಕಿ: ಯೋಗವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ಹಾಗೂ ಸಾತ್ವಿಕ ಜೀವನಕ್ಕೆ ಪೂರಕವಾಗಿದ್ದು, ಇಂದಿನ ಒತ್ತಡದ ಬದುಕಿನಲ್ಲಿ ಯೋಗ ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಜೈ ಗುರುದೇವ ಯೋಗ ಟ್ರಸ್ಟ್ ಅಧ್ಯಕ್ಷ ಸಂತೋಷ ಬಿ.ಜಿ. ಪಾಟೀಲ ಹೇಳಿದರು.

ಪಟ್ಟಣದ ದೇವಿನಗರದ ದೇವಿ ಮಂದಿರದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪತಂಜಲಿ ಯೋಗ ಸಮಿತಿ, ಜೈ ಗುರುದೇವ ಯೋಗ ಟ್ರಸ್ಟ್ ಹಾಗೂ ನವರಾತ್ರಿ ಉತ್ಸವ ಸಮಿತಿ, ದೇವಿನಗರ ಭಾಲ್ಕಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಯೋಗ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿತ್ಯ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಂಡರೆ ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಆರೋಗ್ಯಕರ ಬದುಕಿನೊಂದಿಗೆ ಸಾತ್ವಿಕ ಚಿಂತನೆ ಬೆಳೆಸುವಲ್ಲಿ ಯೋಗದ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

news_1792318166_1_638.webp

 

ಪತಂಜಲಿ ಯೋಗ ಸಮಿತಿಯ ತಾಲೂಕು ಸಂಚಾಲಕ ಹರಿದೇವ ರುದ್ರಮುನಿ ಮಾತನಾಡಿ, ಪ್ರತಿದಿನ ಬೆಳಿಗ್ಗೆ ಕನಿಷ್ಠ ಒಂದು ಗಂಟೆಯನ್ನು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮೀಸಲಿಡಬೇಕು. ನಿಯಮಿತವಾಗಿ ಯೋಗಾಭ್ಯಾಸ ಮಾಡುವುದರಿಂದ ದೇಹ ಸದೃಢವಾಗುವುದರ ಜೊತೆಗೆ ದಿನವಿಡೀ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಶಿಬಿರದಲ್ಲಿ ಯೋಗ ಶಿಕ್ಷಕರಾದ ಪಂಡಿತ ಪಾಟೀಲ, ಚಂದ್ರಕಾಂತ ಹೈಬತಪುರೇ, ಮಂಗಲಾ ಕಾಡಾದೆ, ರಮೇಶ ಬರ್ಮಾ ಹಾಗೂ ಸಿಂಧೂ ಹರಿದೇವ ಅವರು ವಿವಿಧ ಯೋಗಾಸನ, ಪ್ರಾಣಾಯಾಮ ಮತ್ತು ಆರೋಗ್ಯಕರ ಜೀವನಶೈಲಿಯ ಕುರಿತು ತರಬೇತಿ ನೀಡಿದರು. ಶಿಬಿರದಲ್ಲಿ ನೂರಾರು ಜನರು ಭಾಗವಹಿಸಿ ಯೋಗಾಭ್ಯಾಸದ ಪ್ರಯೋಜನ ಪಡೆದುಕೊಂಡರು.

news_1792318166_3_762.webp

 

ದೇವಸ್ಥಾನದ ಅಧ್ಯಕ್ಷ ದಿಲೀಪ ಢವಳೇ ಮಾತನಾಡಿ, ನವರಾತ್ರಿ ಉತ್ಸವದ ಅಂಗವಾಗಿ ಪ್ರತಿವರ್ಷ ವಿವಿಧ ಧಾರ್ಮಿಕ, ಸಾಮಾಜಿಕ ಹಾಗೂ ಆರೋಗ್ಯಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಯೋಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಜೈ ಗುರುದೇವ ಯೋಗ ಟ್ರಸ್ಟ್‌ನ ಪದಾಧಿಕಾರಿಗಳು ಶಿಬಿರವನ್ನು ವ್ಯವಸ್ಥಿತವಾಗಿ ನಡೆಸಿಕೊಡುತ್ತಿರುವುದು ಸಂತಸ ತಂದಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯರಾದ ಸೂರ್ಯಕಾಂತ ಬಿರಾದಾರ, ನೀಲಕಂಠ ಬಿರಾದಾರ, ಸುರೇಶ ಕಾಳೆ, ಕಲ್ಲಪ್ಪ ಪಂಡರಗೆರೆ, ಸೋಮನಾಥ ಪಾಟೀಲ, ನಿರಂಜಪ್ಪ ಪಾತ್ರೆ, ಶಿವಾನಂದ ಗಂದಗೆ, ರಾಜಶೇಖರ ಪಾಟೀಲ, ಈಶ್ವರ ಪಾಟೋದೆ, ಮುರಳಿಧರ ತೋರಖಡೇ, ಧನರಾಜ, ಆರತಿ ಮೆಹತ್ರೆ ಸೇರಿದಂತೆ ನವರಾತ್ರಿ ಉತ್ಸವ ಸಮಿತಿ ಹಾಗೂ ಯೋಗ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ :ಸಂತೋಷ ಬಿಜಿ ಪಾಟೀಲ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST