Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ

Advertisement
------------------------------------------- ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು

ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ‌‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಳೆಹಾನಿ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಈ ಬಾರಿ ಅವಧಿಗೂ ಮುನ್ನವೇ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ನಿರೀಕ್ಷೆಗಿಂತ ಹೆಚ್ಚಾಗಿ ಬಿದ್ದಿದೆ. ಜನವರಿಯಿಂದ ಈವರೆಗೆ ವಾಡಿಕೆಯಂತೆ 177.4 ಮಿ.ಮೀ ಮಳೆಯಾಗಬೇಕಿತ್ತು. ಈ ಬಾರಿ 801.7 ಮಿ.ಮೀ ಅಂದರೆ ಮೂರು ಪಟ್ಟು ಹೆಚ್ಚು ಮಳೆಯಾಗಿದೆ. ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಪ್ರವಾಹ, ಅತಿವೃಷ್ಠಿ ಸಮಸ್ಯೆಗಳನ್ನು ಎದುರಿಸಲು ಅಗತ್ಯವಾಗಿರುವ ಎಲ್ಲಾ ರೀತಿಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿರಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಂಟ್ರೋಲ್ ರೂಂಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು. ಯಾವುದೇ ಮಳೆಹಾನಿ ದೂರುಗಳು ಬಂದಲ್ಲಿ ಕೂಡಲೇ ಸ್ಪಂದಿಸಬೇಕು. ಅತಿವೃಷ್ಠಿಯಿಂದ ತೊಂದರೆಗೊಳಗಾದವರಿಗೆ ಪರಿಹಾರವನ್ನು ಸಹ ತ್ವರಿತವಾಗಿ ನೀಡಬೇಕು ಎಂದು ಸಚಿವರು ಆದೇಶಿಸಿದರು. ‌

ವರಾಹಿ ಜಲಾಶಯದ ನೀರಿನ ಮಟ್ಟ ಹಾಗೂ ಒಳಹರಿವಿನ ಬಗ್ಗೆ ಮಾಹಿತಿ ಆಗಿಂದಾಗ್ಗೆ ಪಡೆಯುತ್ತಿರಬೇಕು. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಮುಂಚಿತವಾಗಿಯೇ ತಿಳಿಸಿ, ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸಬೇಕು. ಇದರಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಗೆ ಹೊರಗಿನಿಂದ ಆಗಮಿಸುವ ಪ್ರವಾಸಿಗರಿಗೆ ಕಡಲ ತೀರದಲ್ಲಿ ಹಾಗೂ ಹಳ್ಳ, ಕೊಳ್ಳ, ಜಲಪಾತಗಳ ಬಗ್ಗೆ ಅರಿವಿಲ್ಲದೇ ಪ್ರಾಣಹಾನಿ ಪ್ರಕರಣಗಳು ಉಂಟಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಸಾರ್ವನಿಕರಿಗೆ ಮುನ್ಸೂಚನೆ ನೀಡುವ ಫಲಕಗಳನ್ನು ಅಳವಡಿಸಬೇಕು. ಸಾಧ್ಯವಾದಲ್ಲಿ ಅಂತಹ ಸ್ಥಳಗಳಲ್ಲಿ ಸಿಬ್ಬಂದಿ ನಿಯೋಜನೆಯನ್ನು ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯ ಗಡಿಭಾಗದ ಸಮೀಪ ಸಹ ಸಣ್ಣ-ಪುಟ್ಟ ಪ್ರಕರಣಗಳು ಆಗಿರುವುದು ಕೇಳಿಬರುತ್ತಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥಿತವಾಗಿರುವಂತೆ ಕ್ರಮ ವಹಿಸಬೇಕು. ಅನಗತ್ಯವಾಗಿ ಕಾನೂನು ಉಲ್ಲಂಘಿಸುವ ಘಟನೆಗಳು ಜರುಗದ ಹಾಗೆ ಎಚ್ಚರವಹಿಸಬೇಕು ಎಂದು ಆದೇಶಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೇಂದ್ರ ಸ್ಥಾನಗಳಲ್ಲಿದ್ದು, ಪ್ರಕೃತಿ ವಿಕೋಪ ನಿರ್ವಹಣೆ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳಲು ಕಾರ್ಯಪ್ರವೃತ್ತರಾಗಿರಬೇಕು. ಜನಸಾಮಾನ್ಯರಿಗೆ ಸ್ಪಂದಿಸಲು ಅನುಕೂಲವಾಗುವ ಹಾಗೆ ತಮ್ಮ ಮೊಬೈಲ್ ಅನ್ನು ದಿನದ ಇಪ್ಪತ್ತನಾಲ್ಕು ಗಂಟೆಯೂ ಸಕ್ರೀಯವಾಗಿ ಇಟ್ಟುಕೊಂಡು ದೂರು ಬಂದಾಗ ಕೂಡಲೇ ಸ್ಪಂದಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್.ಕೆ, ಡಿ.ಎಫ್.ಓ ಗಣಪತಿ, ಉಪ ವಿಭಾಗಾಧಿಕಾರಿ ರಶ್ಮಿ.ಎಸ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ