LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಜಿ.ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು 

Advertisement

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಏಕಾಏಕಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯಕ್ರಮದಲ್ಲಿ ಡಿಸಿಎಂ ಪರಮೇಶ್ವರ್ ಪಾಲ್ಗೊಂಡಿದ್ದರು.ಆಟಗಾರರಿಗೆ ಶುಭ ಕೋರಿದ್ದರು. ಇದೇ ವೇಳೆ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.

ಇದ್ದಕ್ಕಿದ್ದಂತೆ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ವೈದೇಹಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರಮೇಶ್ವರ್‌ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಆಸ್ಪತ್ರೆಗೆ ದೌಡಾಯಿಸಿ ಆರೋಗ್ಯ ವಿಚಾರಿಸಿದರು.

ಪರಮೇಶ್ವರ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಅಗತ್ಯ ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ವೈದ್ಯಕೀಯ ತಪಾಸಣೆಗಳಿಗೆ ಒಳಪಡಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST