Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

1600 ಪಿ.ಎಸ್.ಐ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ : ಜಿ. ಪರಮೇಶ್ವರ್

Advertisement
ಬೆಳಗಾವಿ: ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು.

ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ.

ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿ.ಎಸ್.ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು.

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಹುದ್ದೆಗಳಲ್ಲಿ 1394 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

155 ಹುದ್ದೆಗಳು ಖಾಲಿಯಿವೆ. ಪೊಲೀಸ್ ಠಾಣೆಗಳ ದಿನನಿತ್ಯದ ಕರ್ತವ್ಯಕ್ಕೆ ತೊಂದರೆಯಾಗದಂತೆ 103 ಗೃಹ ರಕ್ಷಕ ಸಿಬ್ಬಂದಿ ನೇಮಿಸಿಕೊಂಡು ಕರ್ತವ್ಯ ಭಾರವನ್ನು ಸರಿದೂಗಿಸಲಾಗಿದೆ ಎಂದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ