Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ : ಜಿ. ಪರಮೇಶ್ವರ್ 

Advertisement
ಮೈಸೂರು : ಪಂಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕ ಉಪ ಚುನಾವಣೆ ಗದ್ದಲದಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿತ್ತು.

ಆದರೆ, ಇದೀಗ ಗೃಹ ಸಚಿವ ಜಿ ಪರಮೇಶ್ವರ್ ನಾಯಕತ್ವ ಬದಲಾವಣೆ ವಿಚಾರವಾಗಿ ಸ್ಫೋಟಕವಾದ ಹೇಳಿಕೆ ನೀಡಿದ್ದು, ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ.ಇದಕ್ಕೆ ಹೈ ಕಮಾಂಡ್ ಸ್ಪಷ್ಟನೆ ಬೇಕಿಲ್ಲ ಎಂದು ತಿಳಿಸಿದ್ದಾರೆ.

ಮೈಸೂರಲ್ಲಿ ಮಾತನಾಡಿದ ಅವರು, ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು.

ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದರು.

2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು ತಾನೇ? ಹೈ ಕಮಾಂಡ್ ಯಾವ ಗೊಂದಲಗಳನ್ನ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರು ಅದು ಮುಖ್ಯ ಅಲ್ಲ ಎಂದರು.

ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಬದಲಾವಣೆ ಬಗ್ಗೆ ಮಾತನಾಡಿದ್ದಾರಾ? ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್