Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ನಾಲ್ಕು ತಿಂಗಳಲ್ಲಿ ಗೇಟರ್ ಬೆಂಗಳೂರು ಚುನಾವಣೆ - ಡಿಸಿಎಂ

Advertisement
ಮೈಸೂರು: ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ. ನಡೆಸಲಾಗುವುದು ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು' ಚುನಾವಣೆ ವಿಳಂಬ ಮಾಡುವುದರಲ್ಲಿ 'ಯಾವುದೇ ಅರ್ಥವಿಲ್ಲ 'ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.


ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ಗ್ರೇಟರ್ ಬೆಂಗಳೂರು ವಿಧೇಯಕ ಕ್ಕೆ ರಾಜ್ಯಪಾಲರು ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, 'ಈ ಬಗ್ಗೆ ಸರ್ವ ಪಕ್ಷಗಳ ಸಭೆ ನಡೆಸಲಾಗುವುದು, ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿ ಈ ಬಗ್ಗೆ ಎಲ್ಲರೂ ತಮ್ಮ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ, ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು, ಅವರ ಶೇಕಡಾ 90ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ, ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ, ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು' ಎಂದು ತಿಳಿಸಿದರು.
ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿದಾಗ ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು, ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು, ಅವರು ಕ್ವಾರ್ಟರ್ ಬೆಂಗಳೂರು, ಪುಲ್ ಬೆಂಗಳೂರು ಎಂದು ಏನಾದರು ಹೇಳಲಿ,
ಆದರೆ ಅವರು ಎಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತಾನಾಡಲಿಲ್ಲ, ಎಂದರೆ ಗೌರವ ಕಡಿಮೆ ಅಲ್ಲವೇ? ಹೀಗಾಗಿ ಮಾತನಾಡುತ್ತಿದ್ದಾರೆ, ಅವರು ಬೆಂಗಳೂರು ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನಾವು ನೀಡುತ್ತೇವೆ ಎಂದರು.
ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ.ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ 'ತಡವಾಗುತ್ತಿದೆ ಎಂದು ಹೇಳಿದವರು ಯಾರು? ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು, ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ ಎಂದರು.
ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳ ಬಾರದು ಎಂದು ಕಾಂಗ್ರೆಸ್ ತಿರ್ಮಾನ ಮಾಡಿರುವ ಬಗ್ಗೆ ಕೇಳಿದಾಗ, ಪಕ್ಷ ವ್ಯಕ್ತಿಗಿಂತ ದೇಶ ದೊಡ್ಡದ್ದು ಎಂಬುದು ನಮ್ಮ ಒಮ್ಮತದ ತೀರ್ಮಾನ ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದು ಕೊಂಡರು ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯ ಬಾರದು ಎಂದು ಹೇಳಿದ್ದೇವು ಎಂದರು.

ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ ಏನು ಬೆಳವಣಿಗೆಯಾಗಿದೆ ತಿಳಿಸಬೇಕು ಹೇಳಿದ್ದೇನೆ ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ, ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು 'ನಮ್ಮ ಹಕ್ಕು' ಎಂದರು.

ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ಗಳ ಬಗ್ಗೆ ಕೇಳಿದಾಗ ' ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿ ಇದರ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
63ನೇ ಹುಟ್ಟು ಹಬ್ಬ ಆಚರಣೆ ಶುಭ ಸುದ್ದಿ ನೀಡುವಿರಾ ಎಂದು ಕೇಳಿದಾಗ ನಾನು ಈ ವರ್ಷ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿಲ್ಲ ಹೊರಗಡೆ ಹೋಗುವುದು ಬೇಡವೆಂದು ನಮ್ಮ ಕುಟುಂಬ ಸದಸ್ಯರು ಜೊತೆ ರಾಜ್ಯದ ಅರಣ್ಯ ಸಂಪತ್ತು ವೀಕ್ಷಣೆ ಮಾಡಿದ್ದೇನೆ ಈ ಬಗ್ಗೆ ನಿಮ್ಮೆಲ್ಲರ ಆಶೀರ್ವಾದ ವಿರಲಿ ಎಂದರು.

(ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ