LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಗೌತಮ್ ಅದಾನಿ: ಕುತೂಹಲ ಮೂಡಿಸಿದ ಮಾತುಕತೆ

Advertisement

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಗೌತಮ್ ಅದಾನಿ ಭೇಟಿ ನೀಡಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕೆಲ ಕಾಲ ಸಮಾಲೋಚನೆ ನಡೆಸಿದರು.

ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಸರ್ಕಾರ ಅಂದಾಜು 17,698 ಕೋಟಿ ವೆಚ್ಚ ನಿಗದಿಪಡಿಸಿತ್ತು. 

ಆದರೆ ಟೆಂಡರ್ ಪ್ರಕ್ರಿಯೆಯಲ್ಲಿ ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಸಂಸ್ಥೆಯು 22,267 ಕೋಟಿ ರೂ. ಮೊತ್ತವನ್ನು ನಮೂದಿಸಿ ಅತಿ ಕಡಿಮೆ ಬಿಡ್ ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ. ಸರ್ಕಾರದ ಅಂದಾಜು ಮೊತ್ತಕ್ಕಿಂತ ಇದು ಹೆಚ್ಚಾಗಿದ್ದರೂ, ಬಿಡ್ಡಿಂಗ್‌ನಲ್ಲಿ ಭಾಗವಹಿಸಿದ್ದ ಇತರೆ ಸಂಸ್ಥೆಗಳಿಗೆ ಹೋಲಿಸಿದರೆ ಅದಾನಿ ಸಂಸ್ಥೆಯ ಮೊತ್ತವೇ ಕಡಿಮೆಯಾಗಿದೆ.

ಟೆಂಡರ್ ಅಂತಿಮಗೊಳ್ಳುವ ಮುನ್ನವೇ ಸಂಸ್ಥೆಯು ಸುರಂಗ ಮಾರ್ಗ ಹಾದುಹೋಗುವ ಸ್ಥಳಗಳಲ್ಲಿ ಅಗತ್ಯವಿರುವ ಪ್ರಾಥಮಿಕ ಭೂ ಸಮೀಕ್ಷೆ ಹಾಗೂ ಮಣ್ಣಿನ ಗುಣಮಟ್ಟ ಪರೀಕ್ಷೆ ಸೇರಿದಂತೆ ಪ್ರಮುಖ ತಾಂತ್ರಿಕ ಪರೀಕ್ಷೆಗಳನ್ನು ಈಗಾಗಲೇ ಪೂರ್ಣಗೊಳಿಸಿದೆ.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
27 ರಂದು ಇಂಗ್ಲೆಂಡ್ -ಪಾಕಿಸ್ತಾನ ದ್ವಿತೀಯ ಟೆಸ್ಟ್ ಪಡಿಕಲ್ ಮತ್ತೇ ಶತಕ: ಭಾರತ 5 ವಿಕೆಟ್ ಗೆ 300ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾದ ರಂಗ ಕಲಾವಿದೆ ಟಿ. ಭಾರತಿಗೆ ಶಾಸಕ ಡಾ.ಎನ್ ಟಿಎಸ್ ರಿಂದ ಸನ್ಮಾನಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಗೌತಮ್ ಅದಾನಿ: ಕುತೂಹಲ ಮೂಡಿಸಿದ ಮಾತುಕತೆಟ್ರ್ಯಾಕ್ಟರ್‌ ಕೀ ತಿರುಗಿಸಿದ ಮಗು : ತಂದೆಯ ಮೇಲೆ ಚಕ್ರ ಹರಿದು ದಾರುಣ ಸಾವು 2 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ದಿ: ಎನ್.ಎಸ್.ಬೋಸರಾಜುಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗೆ 'ED' ಶಾಕ್ : ಮನೆಯ ಬೀಗ ಒಡೆದು ನುಗ್ಗಿದ ಅಧಿಕಾರಿಗಳುಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಾಳೆ ವಿಧಾನಸೌಧ ಮುತ್ತಿಗೆ : ಆರ್. ಅಶೋಕ್ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು, ಕೆರೆಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣು 100, 200 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನು ಆಗಲ್ಲ : ಸಚಿವ ಸವದಿ