ನವದೆಹಲಿ: ಕೇಂದ್ರ ಸಚಿವ ಸಂಪುಟದ ಸದಸ್ಯರಾದ ಜಾರ್ಜ್ ಕುರಿಯನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಾರ್ಜ್ ಕುರಿಯನ್ ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಜಾರ್ಜ್ ಕುರಿಯನ್ ಅವರ ಕೇಂದ್ರ ಸಚಿವ ಸಂಪುಟದ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದಾರೆ.
ರಾಜೀನಾಮೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಈ ಬೆಳವಣಿಗೆಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.


