Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಡೂರಿನಲ್ಲಿ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿ

Advertisement
ಸಂಡೂರು : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಹಮ್ಮಿಕೊಂಡಿದ್ದ ಎದ್ದೇಳು ಕನ್ನಡಿಗ ಕೆ ಆರ್ ಎಸ್ ಪಕ್ಷ ಸೇರು ಬಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ನಗರದ ವಿಜಯ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ತಾಲೂಕಾದ್ಯಂತ ಅಭಿಯಾನ ಮಾಡಿ ಜನ ಜಾಗೃತಿ,ಹಾಗೂ ಪಕ್ಷದ ಸದಸ್ಯತ್ವ ಮಾಡುವ ಮೂಲಕ ದೇಣಿಗೆ ಸಂಗ್ರಹಿಸಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಅವರು ಇತ್ತೀಚಿನ ದಿನಗಳಲ್ಲಿ ಕನ್ನಡಿಗರು ಅನುಭವಿಸುತ್ತಿರುವ ನೋವುಗಳಿಗೆ,ಕಷ್ಟ ಕಾರ್ಪಣ್ಯಗಳಿಗೆ ನಮ್ಮನ್ನು ಆಳುತ್ತಿರುವ ಎಲ್ಲಾ ರಾಜಕೀಯ ಪಕ್ಷಗಳು ನೇರವಾಗಿ ಕಾರಣ.ಅವರವರ ಸ್ವಾರ್ಥದ ಮತ್ತು ಕುಟುಂಬದ ರಾಜಕಾರಣದಲ್ಲಿ ತಾಲೂಕಿನ ಜನರನ್ನು ಮೂರ್ಖರನ್ನಾಗಿ ಮಾಡಿ ಜನರನ್ನು ವಂಚಿಸುತ್ತಿದ್ದಾರೆ.

ಜನಪರವಾದ ಆಡಳಿತ ನಡೆಸಬೇಕಾದ ಪಕ್ಷಗಳು ಜಾತಿ ರಾಜಕಾರಣ,ಹಣಬಲದ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ ಹಾಗಾಗಿ ನಮ್ಮ ಪಕ್ಷವು ಕನ್ನಡ ನಾಡಿನ ನೆಲ,ಜಲ,ಗಡಿ ಭಾಷೆಯ ಉಳಿವಿಗಾಗಿ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡುವಿಕೆಗಾಗಿ ಒತ್ತಾಯಿಸಿ ಮುಂದಿನ ನವಂಬರ್ ತಿಂಗಳಲ್ಲಿ ಒಂದು ದೊಡ್ಡ ಸಮಾವೇಶ ಆಯೋಜಿಸಲಾಗುತ್ತಿದ್ದು ತಾಲೂಕಿನ ಸಮಸ್ತ ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಖಾದರಬಾಷಾ ಮಾತನಾಡಿ ರೈತರಿಗೆ,ಮಹಿಳೆಯರಿಗೆ,ವಿದ್ಯಾರ್ಥಿಗಳಿಗೆ,ಕೃಷಿ ಕಾರ್ಮಿಕರಿಗೆ ಉತ್ತಮವಾದ ಜೀವನ ನಿರ್ವಹಣೆಗೆ ಅನಾನುಕೂಲದ ವಾತಾವರಣ ನಿರ್ಮಾಣವಾಗಿದೆ ಈ ಎಲ್ಲಾ ಅವ್ಯವಸ್ಥೆಗಳನ್ನು ವಿರೋಧಿಸಿ ಪ್ರತಿಯೊಬ್ಬರು ಉತ್ತಮವಾದ ಜನ ಜೀವನ ಮಾಡುವಂತೆ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಜನರಿಗೆ ತಲುಪಿಸಿ ಕನ್ನಡಿಗರನ್ನು ಜಾಗೃತಿ ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದು ಇದಕ್ಕೆ ಕನ್ನಡಪರ,ರೈತಪರ,ಪ್ರಗತಿಪರ ಸಂಘಟನೆಗಳ ಮುಖಂಡರು,ನಾಯಕರು ಬೆಂಬಲಿಸಬೇಕೆಂದು ವಿನಂತಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಮುಖಂಡರಾದ ಶ್ರೀನಿವಾಸ ರೆಡ್ಡಿ,ಜಿಲ್ಲಾ ಕಾರ್ಯದರ್ಶಿ ಕಟ್ಟೆ ಬಸಪ್ಪ,ರೈತ ಘಟಕದ ಜಿಲ್ಲಾಧ್ಯಕ್ಷ ಜನಾರ್ಧನ ರೆಡ್ಡಿ, ಸಂಡೂರು ತಾಲೂಕಾಧ್ಯಕ್ಷ ಮಂಜುನಾಥ್ ಗೌಳಿ,ಉಪಾಧ್ಯಕ್ಷ ಶರ್ಮಾಸ ವಲಿ,ಪ್ರಧಾನ ಕಾರ್ಯದರ್ಶಿ ರವಿ ನಾಡಿಗೇರ,ಕಾರ್ಯದರ್ಶಿಗಳಾದ ಮೆಹಬೂಬ್ ಬಾಷಾ,ಪಂಪಾಪತಿ,ರಾಮು ನಾಯಕ, ಇಮಾಮ ಬಾಷಾ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ನಾರಾಯಣ,ಕೂಡ್ಲಿಗಿ ಅಧ್ಯಕ್ಷ ಶರಣಪ್ಪ,ಲೋಕೇಶ್,ಉಪಾಧ್ಯಕ್ಷ ಮಂಜುನಾಥ್,ಮೋಹನ್, ಹುಚ್ಚುಸಾಬ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವರದಿ: ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ