LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತಿಪಟೂರಿನ ಕೊಬ್ಬರಿ, ಸಾಣಿಕಟ್ಟೆ ಉಪ್ಪು ಸೇರಿ ರಾಜ್ಯದ ನಾಲ್ಕು ಉತ್ಪನ್ನಗಳಿಗೆ ಜಿಐ ಮಾನ್ಯತೆ 

Advertisement

ತುಮಕೂರು: ಕರ್ನಾಟಕದ (Karnataka) ಸಾಂಪ್ರದಾಯಿಕ ಕೃಷಿ ಉತ್ಪನ್ನಗಳು ಮತ್ತು ಕರಕುಶಲ ಪರಂಪರೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಡಲಾಗಿದೆ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD), ರಾಜ್ಯದ ನಾಲ್ಕು ವಿಶಿಷ್ಟ ಉತ್ಪನ್ನಗಳಿಗೆ ಭೌಗೋಳಿಕ ಸೂಚನೆ (GI) ನೋಂದಣಿ ತಂದುಕೊಡಲು ವಿಶೇಷ ಬೆಂಬಲ ನೀಡಿದೆ.

ಈ ಮಹತ್ವದ ನಿರ್ಧಾರದಿಂದಾಗಿ ಗ್ರಾಮೀಣ ಆರ್ಥಿಕತೆ ಚೇತರಿಸಿಕೊಳ್ಳುವುದಲ್ಲದೆ, ಸ್ಥಳೀಯ ಉತ್ಪಾದಕರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೊಸ ಮಾರುಕಟ್ಟೆ ಅವಕಾಶಗಳು ತೆರೆದುಕೊಳ್ಳಲಿವೆ. 

ಈ ಬಾರಿ ಜಿಐ ಟ್ಯಾಗ್ ಪಡೆಯಲು ಅರ್ಹತೆ ಗಳಿಸಿರುವ ಪಟ್ಟಿಯಲ್ಲಿ ಪ್ರಮುಖವಾಗಿ ತುಮಕೂರು ಜಿಲ್ಲೆಯ ಹೆಮ್ಮೆಯಾದ ತಿಪಟೂರು ಕೊಬ್ಬರಿ (ತೆಂಗಿನಕಾಯಿ) ಸ್ಥಾನ ಪಡೆದಿದೆ.

ಇದರೊಂದಿಗೆ ಹಾಸನ ಹಾಗೂ ಸುತ್ತಮುತ್ತಲ ಪ್ರದೇಶದ ಐತಿಹಾಸಿಕ ಹೆಗ್ಗುರುತಾದ ಹೊಯ್ಸಳ ಶೈಲಿಯ ಕಲ್ಲಿನ ಕೆತ್ತನೆ ಕಲೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಸಾಣಿಕಟ್ಟೆ ಉಪ್ಪು ಹಾಗೂ ಹವಾಮಾನ ಬದಲಾವಣೆಯನ್ನು ಸಮರ್ಥವಾಗಿ ತಡೆದುಕೊಳ್ಳುವ ವಿಶಿಷ್ಟ ಗುಣ ಹೊಂದಿರುವ ಕುಂಬಿ ಮುದ್ಲಿ (ಟಾರೋ/ಕೊಲೊಕಾಸಿಯಾ ಗೆಡ್ಡೆ ಜಾತಿಗೆ ಸೇರಿದ ತರಕಾರಿ) ಉತ್ಪನ್ನಗಳನ್ನು ಗುರುತಿಸಲಾಗಿದೆ.

ಈ ನಾಲ್ಕು ಉತ್ಪನ್ನಗಳು ತಮ್ಮದೇ ಆದ ವಿಶಿಷ್ಟ ಭೌಗೋಳಿಕ ಹಿನ್ನೆಲೆ, ಸಾಂಪ್ರದಾಯಿಕ ಶೈಲಿ ಮತ್ತು ಗುಣಮಟ್ಟದಿಂದಾಗಿ ಇಡೀ ದೇಶದ ಗಮನ ಸೆಳೆಯಲಿವೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ