ನವದೆಹಲಿ: ಬಂಗಾಳಕೊಲ್ಲಿಯಲ್ಲಿ(Bay of Bengal) ಉಂಟಾಗಿರುವ ಚಂಡಮಾರುತದ ಸಕ್ರಿಯತೆಯಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ಹವಾಮಾನ ವೈಪರೀತ್ಯ(Extreme weather) ಉಂಟಾಗಲಿದ್ದು, ಗಂಟೆಗೆ 65 ಕಿ.ಮೀ.ವರೆಗೆ ವೇಗದ ಗಾಳಿ ಹಾಗೂ ಭಾರಿ ಮಳೆಯಾಗುವ(Heavy rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅಕ್ಟೋಬರ್ 2ರಂದು ದೆಹಲಿ-ಎನ್‌ಸಿಆರ್, ಉತ್ತರ ಪ್ರದೇಶ, ಬಿಹಾರ ಹಾಗೂ ಜಾರ್ಖಂಡ್ ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಬಿಹಾರದ ಸೀಮಾಂಚಲ ಜಿಲ್ಲೆಗಳಲ್ಲಿ ಸಿಡಿಲು ಬಡಿಯುವ ಅಪಾಯವಿದೆ. ಇನ್ನು ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್‌ಗಳಲ್ಲೂ ಬಿರುಗಾಳಿ ಸಹಿತ ಮಳೆಯಾಗಲಿದೆ.


