Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರಿನಲ್ಲಿ ಬಾಲಕಿ ರೇಪ್ & ಮರ್ಡರ್ ಕೇಸ್ : ಆರೋಪಿ ಕಾಲಿಗೆ ಗುಂಡೇಟು 

Advertisement
ಮೈಸೂರು: ನಗರದ ವಸ್ತುಪ್ರದರ್ಶನ ಮುಂಭಾಗದ ರಸ್ತೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆಗೈದಿರುವ ಘಟನೆ ಮಾಸುವ ಮುನ್ನವೇ, ಆ ಸ್ಥಳದ ಸಮೀಪದಲ್ಲೇ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಇದರಿಂದ ಸಾಂಸ್ಕೃತಿಕ ನಗರಿ ಬೆಚ್ಚಿಬಿದ್ದಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್, ಆರೋಪಿ ಪತ್ತೆಗೆ ತಕ್ಷಣವೇ ತಂಡವನ್ನುರಚಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಘಟನೆ ನಡೆದ ಕೇವಲ ಎಂಟು ಗಂಟೆಗಳ ಅವಧಿಯಲ್ಲಿ ದುಷ್ಕರ್ಮಿಯ ಹೆಡೆಮುರಿ ಕಟ್ಟಿದ್ದಾರೆ.

ಕಲಬುರ್ಗಿ ಜಿಲ್ಲೆಯ ಸುಲ್ತಾನಪುರ ಮೂಲದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಕಾರ್ತಿಕ್‌ನನ್ನು ಸಿಸಿ ಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕೊಳ್ಳೇಗಾಲದಲ್ಲಿ ಬಂಧಿಸಿದ ಪೊಲೀಸರು ಮೈಸೂರಿಗೆ ಕರೆತರುವಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆದಿದ್ದಾರೆ.

ಅಲೆಮಾರಿ ಸಮುದಾಯದ ದಂಪತಿಯ 8 ವರ್ಷದ ಮಗಳ ಮೇಲೆ ವಸ್ತು ಪ್ರದರ್ಶನ ಆವರಣದ ಕುಸ್ತಿ ಅಖಾಡದ ಮುಂಭಾಗವಿರುವ ಖಾಲಿ ನಿವೇಶನದಲ್ಲಿ ಸಿದ್ದಲಿಂಗಪುರ ಮೂಲದ ಯುವಕ ಕಾರ್ತಿಕ್ ಅತ್ಯಾಚಾರ ನಡೆಸಿ ಹತ್ಯೆ ಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಸ್ತುತ ಆರೋಪಿಯನ್ನು ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ನಗರದ ಇಟ್ಟಿಗೆಗೂಡಿನ ಫುಟ್‌ಪಾತ್‌ನಲ್ಲಿ ತನ್ನ ಕುಟುಂಬದೊಂದಿಗೆ ಮಲಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಕಾರ್ತಿಕ್‌ ಆಕೆಯ ದೇಹದ ವಿವಿಧ ಭಾಗಗಳಿಗೆ ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಿದ್ದಾನೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ