ಬೆಂಗಳೂರು: ಕರ್ನಾಟಕವು ಎಂದೂ ಕಾಣದ ಭೀಕರ ಮೈದಾನದಲ್ಲೇ ದುರಂತ: ಗೋಲ್‌ಕೀಪರ್ ಡಿಕ್ಕಿಯಾಗಿ ಆಟಗಾರ ಸಾವು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಆರ್ಥಿಕ ನೆರವನ್ನು ತ್ವರಿತವಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ. ಪರಮೇಶ್ವರ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ.
ಸೋಮವಾರ, ನವೆಂಬರ್ 2ರಂದು ಬರೆದಿರುವ ಪತ್ರಗಳಲ್ಲಿ ರಾಜ್ಯದ ಪರಿಷ್ಕೃತ ಒಟ್ಟು ಬರ ಪರಿಹಾರದ ಬೇಡಿಕೆಯಾದ ₹22,400.58 ಕೋಟಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದಿರುವ ಡಾ. ಜಿ. ಪರಮೇಶ್ವರ ಅವರು, ಬರ ಪರಿಸ್ಥಿತಿಯ ಗಂಭೀರತೆಯನ್ನು ಖುದ್ದಾಗಿ ವಿವರಿಸಲು, ರಾಜ್ಯದ ಮನವಿ ಪತ್ರವನ್ನು ಸಲ್ಲಿಸಲು ಹಾಗೂ ತ್ವರಿತ ಆರ್ಥಿಕ ನೆರವು ಕೋರಲು ಮೂವರ ಭೇಟಿಗೂ ಸಮಯ ನೀಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದ 226 ತಾಲ್ಲೂಕುಗಳು ಬರ ಪೀಡಿತವಾಗಿದ್ದು, 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ಇದರಿಂದ ₹62,481.88 ಕೋಟಿ ಅಂದಾಜು ಆರ್ಥಿಕ ನಷ್ಟ ಉಂಟಾಗಿದೆ.
ಈ ಸಂಕಷ್ಟದಿಂದ ಲಕ್ಷಾಂತರ ರೈತ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಪತ್ರಗಳಲ್ಲಿ ವಿವರಿಸಿದ್ದಾರೆ.
ಕೇಂದ್ರದ ಪರಿಷ್ಕೃತ ಪರಿಹಾರ ಮಾನದಂಡಗಳೂ ಅಸಮರ್ಪಕ
ಕೇಂದ್ರ ಗೃಹ ಸಚಿವಾಲಯವು 2026ರ ಅಕ್ಟೋಬರ್ 26ರಂದು ಹೊರಡಿಸಿರುವ ಅಧಿಸೂಚನೆಯ ಮೂಲಕ 2026-27ರಿಂದ 2030-31ರ ಅವಧಿಗೆ ರಾಜ್ಯ ವಿಪತ್ತು ಪ್ರತಿಕ್ರಿಯಾ ನಿಧಿ (SDRF) ಹಾಗೂ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ (NDRF) ಅಡಿಯಲ್ಲಿನ ಪರಿಹಾರ ಮಾನದಂಡಗಳನ್ನು ಪರಿಷ್ಕರಿಸಿದೆ ಎಂದು ಡಾ. ಜಿ. ಪರಮೇಶ್ವರ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಪರಿಷ್ಕೃತ ಮಾನದಂಡಗಳ ಪ್ರಕಾರ, ಕರ್ನಾಟಕದ ಬೆಳೆ ಹಾನಿ ಇನ್‌ಪುಟ್ ಸಬ್ಸಿಡಿ ಪರಿಹಾರದ ಅಗತ್ಯವು ₹6,128.70 ಕೋಟಿಯಿಂದ ₹7,943.55 ಕೋಟಿಗೆ ಹೆಚ್ಚಳವಾಗಿದ್ದು, ₹1,814.85 ಕೋಟಿಯಷ್ಟು ಹೆಚ್ಚುವರಿ ನೆರವು ಅಗತ್ಯವಾಗಿದೆ.
ಇದರ ಪರಿಣಾಮವಾಗಿ ರಾಜ್ಯದ ಒಟ್ಟು ಬರ ಪರಿಹಾರದ ಬೇಡಿಕೆಯು ₹20,585.73 ಕೋಟಿಯಿಂದ ₹22,400.58 ಕೋಟಿಗೆ ಪರಿಷ್ಕೃತಗೊಂಡಿದೆ. ಈ ಹಿಂದೆ ಸಲ್ಲಿಸಲಾಗಿದ್ದ ಮನವಿ ಪತ್ರದಲ್ಲಿನ ಇತರ ಎಲ್ಲ ಅಂಶಗಳು ಯಥಾಸ್ಥಿತಿಯಲ್ಲಿವೆ.
ಕೇಂದ್ರ ಸರ್ಕಾರವು ಪರಿಹಾರದ ಮಾನದಂಡಗಳನ್ನು ಪರಿಷ್ಕರಿಸಿರುವ ನಿರ್ಧಾರವನ್ನು ಸ್ವಾಗತಿಸಿರುವ ಡಾ. ಜಿ. ಪರಮೇಶ್ವರ ಅವರು, ಕೃಷಿ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.
ಹವಾಮಾನ ವೈಪರೀತ್ಯಗಳಿಂದ ಉಂಟಾಗುತ್ತಿರುವ ವಿಪತ್ತುಗಳ ತೀವ್ರತೆಯೂ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ರೈತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಹೋಲಿಸಿದರೆ ಪರಿಹಾರದ ಮೊತ್ತದಲ್ಲಿ ಮಾಡಿರುವ ಹೆಚ್ಚಳ ಸಾಕಾಗುವುದಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯದ 226 ತಾಲ್ಲೂಕುಗಳು ಬರ ಪೀಡಿತವಾಗಿದ್ದು, 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ಇದರಿಂದ ₹62,481.88 ಕೋಟಿ ಅಂದಾಜು ಆರ್ಥಿಕ ನಷ್ಟ ಉಂಟಾಗಿದೆ.
ಈ ಸಂಕಷ್ಟದಿಂದ ಲಕ್ಷಾಂತರ ರೈತ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಪತ್ರಗಳಲ್ಲಿ ವಿವರಿಸಿದ್ದಾರೆ.


