ಬೆಂಗಳೂರು : ಬಂಗಾರ ತ್ಯಜಿಸುವುದು ಅಚ್ಚೆ ದಿನ್, ಬದುಕು ತ್ಯಜಿಸುವುದು ಅಮೃತ್ ಕಾಲ್. ಇದು ಮೋದಿ ಮ್ಯಾಜಿಕ್! ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಅವರು ತಮ್ಮ ವೈಫಲ್ಯದ ಆಡಳಿತದ ಕಾರಣಕ್ಕೆ ಜನರಿಂದ ತ್ಯಾಗವನ್ನು ಬಯಸುವುದಕ್ಕೆ "ಅಮೃತ ಕಾಲ" ಎಂದು ಹೆಸರಿಟ್ಟಿದ್ದಾರೆ ಪ್ರಧಾನಿ ಮೋದಿ!
ಹೊಣೆಗಾರಿಕೆ ಮತ್ತು ಉತ್ತರದಾಯಿತ್ವದ ಜವಾಬ್ದಾರಿಯನ್ನು ಜನರ ತಲೆಗೆ ವರ್ಗಾಯಿಸುವ ಕಲೆ ಮೋದಿಯವರಿಗೆ ಚೆನ್ನಾಗಿ ತಿಳಿದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.
ತಮ್ಮ ವೈಫಲ್ಯದ ಆಡಳಿತದ ಕಾರಣಕ್ಕೆ ಜನರಿಂದ ತ್ಯಾಗವನ್ನು ಬಯಸುವುದಕ್ಕೆ "ಅಮೃತ ಕಾಲ" ಎಂದು ಹೆಸರಿಟ್ಟಿದ್ದಾರೆ ಪ್ರಧಾನಿ ಮೋದಿ! ಹೊಣೆಗಾರಿಕೆ ಮತ್ತು ಉತ್ತರದಾಯಿತ್ವದ ಜವಾಬ್ದಾರಿಯನ್ನು ಜನರ ತಲೆಗೆ ವರ್ಗಾಯಿಸುವ ಕಲೆ ಮೋದಿಯವರಿಗೆ ಚೆನ್ನಾಗಿ ತಿಳಿದಿದೆ
ಕೋವಿಡ್ ನಿರ್ವಹಣೆಯ ವೈಫಲ್ಯದ ಸಮಯದಲ್ಲಿ ತಟ್ಟೆ ಬಡಿಯಿರಿ, ದೀಪ ಹಚ್ಚಿರಿ ಎನ್ನುತ್ತಲೇ ಲಕ್ಷಾಂತರ ಮಂದಿಯನ್ನು ಬಲಿ ಕೊಟ್ಟಿದ್ದಾಯ್ತು
ನೋಟ್ ಬ್ಯಾನ್ ಸಮಯದಲ್ಲಿ "50 ದಿನಗಳ ಸಮಯ ಕೊಡಿ, ಪರಿಸ್ಥಿತಿ ಸರಿ ಹೋಗದಿದ್ದರೆ ನೀವು ಕೊಡುವ ಶಿಕ್ಷೆಗೆ ನಾನು ಸಿದ್ದ" ಎನ್ನುತ್ತಲೇ ನೂರಾರು ಜನರ ಜೀವಕ್ಕೆ ಕಂಟಕವಾಗಿದ್ದಾಯ್ತು.
ಈಗ ಹೊಸ ವರಸೆಯಾಗಿ, ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಮಿತವಾಗಿ ಬಳಸಿ, ಸರಳ ಜೀವನ ನಡೆಸಿ ಎಂಬ ಉಪದೇಶಗಳು ಶುರುವಾಗಿವೆ, ಈ ಉಪದೇಶಗಳು ಯಾವ ಭೀಕರ ದಿನಗಳ ಮುನ್ಸೂಚನೆ BJP Karnataka ?2024 - "ಕಾಂಗ್ರೆಸ್ ನಿಮ್ಮ ಮಂಗಳಸೂತ್ರವನ್ನು ಕಸಿಯುತ್ತದೆ" 2026 - ಬಂಗಾರದ ಮೇಲಿನ ಆಮದು ಸುಂಕ 6%ನಿಂದ 15%ಗೆ ಏರಿಕೆ, ಬಂಗಾರದ ಬೆಲೆ ಸಾರ್ವಕಾಲಿಕ ಏರಿಕೆ ಹಾಗೂ ಬಂಗಾರ ಖರೀದಿಸಬೇಡಿ ಎಂಬ ಬಿಟ್ಟಿ ಉಪದೇಶ!ಈಗ ಮಂಗಳಸೂತ್ರ ಕಸಿಯಲು ಕೈಹಾಕಿದವರು ಯಾರು?ಇದಕ್ಕೆ ಬಿಜೆಪಿಗರು ಉತ್ತರಿಸುವರೇ? ಎಂದು ಪ್ರಶ್ನಿಸಿದ್ದಾರೆ.


