LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

RSSಗೂ ನೋಂದಣಿ ಮಾಡಿಸಲಿದ್ದೇನೆ: ಪ್ರಿಯಾಂಕ್ ಖರ್ಗೆ

Advertisement

ಯಾದಗಿರಿ: ಸಮಾಜದಲ್ಲಿ ಧರ್ಮ ಮತ್ತು ಜಾತಿಗಳ ನಡುವೆ ದ್ವೇಷದ ವಿಷಬೀಜ ಬಿತ್ತುವವರೇ ನಿಜವಾದ ದೇಶದ್ರೋಹಿಗಳು. ಸಂವಿಧಾನವೇ ಸ್ವತಂತ್ರ ಭಾರತದ ಶ್ರೇಷ್ಠ ಶಕ್ತಿ. ಇದರಲ್ಲಿ ಯಾರಿಗೂ ಜಗ್ಗುವುದಿಲ್ಲ, ಬಗ್ಗುವುದೂ ಇಲ್ಲ. ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ನನ್ನ ಹೋರಾಟ ನಿರಂತರವಾಗಿರಲಿದೆ ಎಂದು ಗೃಹ, ಐಟಿಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಶುಕ್ರವಾರ 2023-24ನೇ ಸಾಲಿನ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಅಂದಾಜು ₹31 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

1949ರಲ್ಲಿ ಮನುವಾದಿ ಸಂಘಟನೆಗಳು ನಮಗೆ ಸಂವಿಧಾನ ಬೇಡ, ಮನುಸ್ಮೃತಿ ಬೇಕು ಎಂದು 150 ಬಾರಿ ಪ್ರತಿಭಟನೆ ನಡೆಸಿದ್ದವು. ಆರೆಸ್ಸೆಸ್‌ನ ಮುಖವಾಣಿ 'ಆರ್ಗನೈಸರ್' ಪತ್ರಿಕೆಯಲ್ಲಿ ರಾಷ್ಟ್ರಧ್ವಜ ಮತ್ತು ಸಂವಿಧಾನವನ್ನು ಒಪ್ಪುವುದಿಲ್ಲ ಎಂಬ ನಿಲುವು ವ್ಯಕ್ತಪಡಿಸಲಾಗಿತ್ತು.

 "ಆರೆಸ್ಸೆಸ್ ಇನ್ನೂ ನೋಂದಾಯಿತ ಸಂಘಟನೆಯಾಗಿಲ್ಲ. ದಲಿತ ಸಂಘಟನೆಗಳಾದ ಡಿ.ಎಸ್‌.ಎಸ್‌.ಗಳಿಗೆ ನೋಂದಣಿ ಇರುವಾಗ ಆರೆಸ್ಸೆಸ್‌ಗೂ ಮುಂದಿನ ದಿನಗಳಲ್ಲಿ ನೋಂದಣಿ ಮಾಡಿಸಲಿದ್ದೇನೆ" ಎಂದು ಹೇಳಿದರು.

ಆರೆಸ್ಸೆಸ್‌ನವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರೇ? ಕ್ವಿಟ್ ಇಂಡಿಯಾ ಚಳವಳಿ ಅಥವಾ ದುಂಡುಮೇಜಿನ ಸಭೆಯಲ್ಲಿ ಪಾಲ್ಗೊಂಡಿದ್ದರೇ? ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದ ವ್ಯಕ್ತಿಯ ಪುತ್ಥಳಿಗೆ ಪೂಜೆ ಸಲ್ಲಿಸಿ, ಆತನನ್ನು ದೇಶಪ್ರೇಮಿ ಎಂದು ಕರೆಯುತ್ತಾರೆ. ಹಾಗಾದರೆ ಗಾಂಧೀಜಿ ದೇಶದ್ರೋಹಿಯೇ ಎಂದು ಪ್ರಶ್ನಿಸಿದರು.

ಸ್ವತಂತ್ರ ಭಾರತದಲ್ಲಿ ಸಂವಿಧಾನವೇ ಅತ್ಯುನ್ನತವಾಗಿದೆ. ಸಮಾಜದಲ್ಲಿ ವಿಷಬೀಜ ಬಿತ್ತಿ, ಧರ್ಮ ಮತ್ತು ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುವವರೇ ನಿಜವಾದ ದೇಶದ್ರೋಹಿಗಳು ಎಂಬ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಇಂದು ದೇಶದಲ್ಲಿ ಯಾರು ಸಮಾಜದಲ್ಲಿ ದ್ವೇಷ ಬಿತ್ತುತ್ತಿದ್ದಾರೆ ಎಂಬುದನ್ನು ಜನರು ಮನಗಾಣಬೇಕು ಎಂದರು.

ಭಗವಾನ್ ಗೌತಮ ಬುದ್ಧರ ಕಾಲದಿಂದ 2,500 ವರ್ಷಗಳು, ಬಸವಣ್ಣನವರ ಕಾಲದಿಂದ ಸುಮಾರು 900 ವರ್ಷಗಳು ಹಾಗೂ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ಕಳೆದಿವೆ. ಆದರೂ ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ಬದಲಾವಣೆಯ ಕುರಿತು ಮಾತನಾಡುವ ಪರಿಸ್ಥಿತಿ ಮುಂದುವರಿದಿದೆ.

ಸಮಾನತೆ ಮತ್ತು ಸ್ವಾಭಿಮಾನದ ಸಮಾಜ ನಿರ್ಮಾಣವಾಗಬೇಕಾದರೆ ಮಹನೀಯರ ಪ್ರತಿಮೆಗಳನ್ನು ಸ್ಥಾಪಿಸುವುದಷ್ಟೇ ಸಾಲದು; ಅವರ ತತ್ವ, ಆದರ್ಶ ಮತ್ತು ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ನಾನು ಹಾರ, ಶಾಲು, ತುರಾಯಿ ಸ್ವೀಕರಿಸುವುದಿಲ್ಲ. ಅದರ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವಂತೆ ಮನವಿ ಮಾಡುತ್ತೇನೆ.

ಅವುಗಳನ್ನು ಸಂಗ್ರಹಿಸಿ ಅರಿವು ಕೇಂದ್ರಗಳಿಗೆ ನೀಡಲಾಗುತ್ತದೆ. ವ್ಯಕ್ತಿಪೂಜೆ ಬಿಟ್ಟು ಪುಸ್ತಕ ಓದುವ, ವೈಜ್ಞಾನಿಕ ಮತ್ತು ಸಾಮಾಜಿಕ ಚಿಂತನೆ ಬೆಳೆಸುವ ಸಂಸ್ಕೃತಿ ಬೆಳೆಸಬೇಕು ಎಂದು ಹೇಳಿದರು.

ಜೆಸಿಬಿ ಮೂಲಕ ಹಾರ ಹಾಕುವುದು, ಎಲ್ಲೆಡೆ ದೊಡ್ಡ ದೊಡ್ಡ ಪೋಸ್ಟರ್‌ಗಳನ್ನು ಹಾಕುವುದು ಮುಖ್ಯವಲ್ಲ. ಮಹನೀಯರ ವಿಚಾರಗಳನ್ನು ಅರಿತುಕೊಂಡು ಅವರ ಆದರ್ಶಗಳನ್ನು ಪಾಲಿಸುವುದು ಮುಖ್ಯ. ಶಿಕ್ಷಣ ಪಡೆದವರು ಪ್ರಶ್ನಿಸಬೇಕು, ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಬಿಜೆಪಿಯವರಿಗೆ ನನ್ನ ಸೂಟು, ಬೂಟು ಸಮಸ್ಯೆಯಲ್ಲ; ಅವರಿಗೆ ನನ್ನ ಘರ್ಜನೆಯೇ ದೊಡ್ಡ ಸಮಸ್ಯೆಯಾಗಿದೆ ಎಂದು ವ್ಯಂಗ್ಯವಾಡಿದರು.

ವಿಶ್ವದ ನಾಲ್ಕನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಕೇಂದ್ರವನ್ನು ದಲಿತ ವ್ಯಕ್ತಿಯೊಬ್ಬರು ಮುನ್ನಡೆಸುತ್ತಿದ್ದಾರೆ ಎಂಬುದನ್ನು ಕೆಲವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದಲಿತರು ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಬಾರದೇ? ಜನಪ್ರತಿನಿಧಿಗಳಾಗಬಾರದೇ? ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್ತಿನ ನೂತನ ಕಟ್ಟಡದ ಉದ್ಘಾಟನೆಗೆ ಆಹ್ವಾನಿಸದಿರುವುದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಸ್ವಚ್ಛಗೊಳಿಸುವಂತಹ ಘಟನೆಗಳು ಯಾವ ಮನಸ್ಥಿತಿಯನ್ನು ತೋರಿಸುತ್ತವೆ ಎಂದು ಪ್ರಶ್ನಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೈಯದ್ ಮುಸ್ತಾಕ್ ಅಲಿ ಟಿ-20 : ಕರ್ನಾಟಕ ಶುಭಾರಂಭ2,000ಕ್ಕೆ ಮರುಳಾಗಬೇಡಿ, 5,000 ರೂ. ಬರುವಂತೆ ಮಾಡಬಲ್ಲೆ: ಕುಮಾರಸ್ವಾಮಿ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ತೆಲುಗು ನಟ ಗಿರಿಬಾಬು ನಿಧನಅಯ್ಯಪ್ಪ ಭಕ್ತರಿಗೆ ಸಿಹಿ ಸುದ್ದಿ :  2 ಲಕ್ಷ ಉಚಿತ ಜೀವ ವಿಮೆ, ಮನೆಯ ಬಾಗಿಲಿಗೇ ಪ್ರಸಾದ RSSಗೂ ನೋಂದಣಿ ಮಾಡಿಸಲಿದ್ದೇನೆ: ಪ್ರಿಯಾಂಕ್ ಖರ್ಗೆಭಾರತ ಕಿರಿಯರ ತಂಡಕ್ಕೆ 338 ರನ್ ಗಳ ಗೆಲುವಿನ ಗುರಿ 15 ಸಾವಿರ ರೂ. ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ 350 ಕೋಟಿ ರೂ. ವಂಚನೆ538 ಕೋಟಿ ರೂ. ಕೊಟ್ಟು ಕೋಟೆ ಖರೀದಿಸಿದ ಫೇಸ್‌ಬುಕ್‌ ಮಾಲಿಕ ಜುಕರ್‌ಬರ್ಗ್‌ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ :  ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅಳುಕಲಾದಗಿಯ ಶ್ರೀ ಗುರುಲಿಂಗೇಶ್ವರ ಪ್ರೌಢ ಶಾಲೆ : ಜವಾಹರಲಾಲ್ ನೆಹರು ಜನ್ಮದಿನದ ಹಾಗೂ ಮಕ್ಕಳ ದಿನಾಚರಣೆ ಆಚರಣೆ