Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ 16 ನೇ ಬಜೆಟ್: ಅಂಗನವಾಡಿ  ಕಾರ್ಯಕರ್ತೆಯರಿಗೆ ಶುಭ ಸುದ್ದಿ

Advertisement
ಬೆಂಗಳೂರುಸಿಎಂ ಸಿದ್ದರಾಮಯ್ಯನವರ ದಾಖಲೆಯ 16ನೇ ಬಜೆಟ್‌ ಮಂಡನೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಾಕಷ್ಟು ಅನುದಾನ ಸಿಕ್ಕಿದೆ.''ರಾಷ್ಟ್ರವು ತನ್ನ ಅರ್ಧದಷ್ಟಿರುವ ಮಹಿಳೆಯರನ್ನು ಆರ್ಥಿಕವಾಗಿ ನಿಷ್ಕ್ರಿಯವಾಗಿಸಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಅವರನ್ನು ಆರ್ಥಿಕವಾಗಿ ಸ್ವತಂತ್ರರನ್ನಾಗಿಸದೆ ಮಾಡುವ ಎಲ್ಲಾ ಅಭಿವೃದ್ಧಿ ಮಾದರಿಗಳು ಟೊಳ್ಳಾಗಿರುತ್ತವೆ'' ಎಂಬ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವ್ಯಾಖ್ಯಾನವನ್ನು ಉಲ್ಲೇಖಿಸಿದ ಸಿಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಈ ಬಾರಿ ಬಜೆಟ್​ನಲ್ಲಿ ಅನುದಾನವನ್ನು ಹಿಂದಿನ ವರ್ಷಕ್ಕಿಂತ ದ್ವಿಗುಣಗೊಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ.

ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು.ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು.

ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ (ನಾಗರಿಕ ಸೌಲಭ್ಯ) ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲಿರಿಸಲಾಗಿದೆ.ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು.

ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು.Cerebral Palsy, Muscular Dystrophy, Parkinson's ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ