LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿದ:  ಶಾಸಕ ಎಸ್ ಮುನಿರಾಜು

Advertisement

ಬೆಂಗಳೂರು : ದಾಸರಹಳ್ಳಿ ವಿಧಾನ ಸಭಾ  ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ರಜನಿ ಫಾರಂ ರಸ್ತೆಯಲ್ಲಿರುವ ಸರ್ಕಾರಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಳೀಯ ಶಾಸಕ ಎಸ್. ಮುನಿರಾಜು ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕ ಎಸ್. ಮುನಿರಾಜು, "ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ನಮ್ಮ ಆದ್ಯತೆಯಾಗಿದೆ. ಈ ನೂತನ ಆರೋಗ್ಯ ಕೇಂದ್ರದಿಂದ ಸುತ್ತಮುತ್ತಲಿನ ಸಾವಿರಾರು ಜನರಿಗೆ ಅನುಕೂಲವಾಗಲಿದ್ದು, ಆರೋಗ್ಯ ಸೇವೆಗಳು ಇನ್ನಷ್ಟು ಸುಲಭವಾಗಿ ಲಭ್ಯವಾಗಲಿವೆ" ಎಂದು ಶಾಸಕ ಎಸ್ ಮುನಿರಾಜು ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದರು. 

ಪಾರ್ವತಿ ನಗರ ವಾರ್ಡಿನ ನೂತನ ಬಿಜೆಪಿ ಅಧ್ಯಕ್ಷ ರಮೇಶ್ (ರಾಮಿ)  "ಈ ಆರೋಗ್ಯ ಕೇಂದ್ರದ ಆರಂಭದಿಂದ ಸ್ಥಳೀಯ ನಿವಾಸಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ದೊರೆಯಲಿದೆ. ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಎಸ್. ಮುನಿರಾಜು ಅವರ ಕೊಡುಗೆ ಶ್ಲಾಘನೀಯವಾಗಿದೆ" ಎಂದು ರಮೇಶ್ (ರಾಮಿ) ತಿಳಿಸಿದರು.

ಈ ಸಂದರ್ಭದಲ್ಲಿ  ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಜೆವಿಎಸ್ ಸತೀಶ್, ರಾಜಗೋಪಾಲ ನಗರ ವಾರ್ಡಿನ  ಮಾಜಿ ಬಿಜೆಪಿ ಅಧ್ಯಕ್ಷ ಆರ್.ಸಿ. ಹರೀಶ್, ನಾಗೇಶ್,  ಬಿಜೆಪಿ ನೂತನ ಅಧ್ಯಕ್ಷ ಬಿ.ಎನ್. ದಿನೇಶ್, ಬಿಜೆಪಿ ಮುಖಂಡ ಈಶ್ವರ್ ಮೋಟಾರ್  ಶೋ ರೂಂ ಮಾಲೀಕ ರಾಜಣ್ಣ, ಡಬಲ್ ರಾಮಣ್ಣ, ಮೋಹನ್ ಕುಮಾರ್, ಡಿ.ಪಿ. ವಿಜಯ್, ಸಂತೋಷ್ ಸೇರಿದಂತೆ ಬಿಜೆಪಿ  ಮುಖಂಡರು ಮಹಿಳೆಯರು  ಕಾರ್ಯಕರ್ತರು ಸಮಸ್ತ ನಾಗರಿಕ ಬಂಧು ಭಗನಿಯರು  ಇದ್ದರು.

ವರದಿ : ಅಯ್ಯಣ್ಣ ಮಾಸ್ಟರ್ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್