LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೆಳಗಾವಿ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸದ ಸರ್ಕಾರ

Advertisement

ಸಾಮಾಜಿಕ ಹೋರಾಟಗಾರ ಪ್ರವೀಣ ನಾಯಿಕ ಆಕ್ರೋಶ  ಜಿಲ್ಲೆಯಲ್ಲಿ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರ ಬೆಳಗಾವಿಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸದೆ ಇರುವುದಕ್ಕೆ ಸಾಮಾಜಿಕ ಹೋರಾಟಗಾರ ಪ್ರವೀಣ ನಾಯಿಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರದ ಈ ಧೋರಣೆ ರೈತ ವಿರೋಧಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಬಿತ್ತನೆ ಮಾಡಿದ ಬೆಳೆಗಳು ಕಣ್ಣೆದುರೇ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಆದರೆ, ಅಧಿಕಾರಿಗಳು ಮಾತ್ರ ವಾಸ್ತವ ಸ್ಥಿತಿಯನ್ನು ಸರ್ಕಾರಕ್ಕೆ ಮುಚ್ಚಿಡುತ್ತಿದ್ದಾರೆ.ಬೇರೆ ಜಿಲ್ಲೆಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿರುವ ಸರ್ಕಾರ, ಬೆಳಗಾವಿ ಜಿಲ್ಲೆಯನ್ನು ಕೈಬಿಟ್ಟಿರುವುದು ಇಲ್ಲಿನ ರೈತರಿಗೆ ಮಾಡಿದ ದ್ರೋಹವಾಗಿದೆ. ಸರ್ಕಾರ ತಕ್ಷಣವೇ ಬೆಳಗಾವಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಪ್ರತಿ ಎಕರೆಗೆ ಸೂಕ್ತ ಬೆಳೆ ಪರಿಹಾರ ನೀಡಬೇಕು. ಜಾನುವಾರುಗಳಿಗೆ ಮೇವಿನ ಬ್ಯಾಂಕ್‌ಗಳನ್ನು ತಕ್ಷಣ ಆರಂಭಿಸಬೇಕು. "ಸರ್ಕಾರ ಒಂದು ವಾರದೊಳಗೆ ಬೆಳಗಾವಿ ಜಿಲ್ಲೆಯನ್ನು ಬರಗಾಲ ಪೀಡಿತ ಎಂದು ಘೋಷಿಸದಿದ್ದರೆ, ಜಿಲ್ಲೆಯ ಸಮಸ್ತ ರೈತರನ್ನು ಒಗ್ಗೂಡಿಸಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು" ಎಂದು ಪ್ರವೀಣ ನಾಯಿಕ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಹೇಶ ಶರ್ಮಾ, ಶರಣಪ್ಪಾ ಶಿಂದೆ, ಅಮೂಲ ಚವಾಣ, ಅನೀಲ ಭಾಮನೆ, ಯಾಸಿನ್ ನದಾಪ, ಅಶೋಕ ಬಡಿಗೇರ, ರೋಹಿದಾಸ ಭಂಡಾರೆ ಉಪಸ್ಥಿತರಿದ್ದರು.

ವರದಿ : ರಾಜು ಮುಂಡೆ 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೈರ್ ಬ್ಲಾಸ್ಟ್, ಕಾರಿನ ಮೇಲೆ ಟ್ರಕ್‌ ಪಲ್ಟಿ : ತಪ್ಪಿದ ಭಾರೀ ಅನಾಹುತಹುಕ್ಕೇರಿ ತಾಲೂಕು ಪಡಿತರ ಚೀಟಿ ಸರ್ವೇ ಕಾರ್ಯದ ತಾಂತ್ರಿಕ ತೊಂದರೆ ನಿವಾರಣೆಗೆ ಆಗ್ರಹಬೆಳಗಾವಿ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸದ ಸರ್ಕಾರಅಮೆರಿಕದಲ್ಲಿ ಮಗಳ ಮದುವೆ : ಆನ್‌ಲೈನ್‌ನಲ್ಲಿ ಅಕ್ಷತೆ ಹಾಕಿ ಆಶೀರ್ವದಿಸಿದ ಪೋಷಕರುರೈಲು ಡಿಕ್ಕಿಯಾಗಿ ವೃದ್ದೆ, ಇಬ್ಬರು ಮೊಮ್ಮಕ್ಕಳು ದುರ್ಮರಣಸೆಪ್ಟೆಂಬರ್ 1ರಿಂದ 10ರವರೆಗೆ ಬಿಜೆಪಿ ಬಳ್ಳಾರಿ ಪಾದಯಾತ್ರೆ: ರೂಟ್ ಮ್ಯಾಪ್ ರೆಡಿ9 ಗಂಟೆಯಲ್ಲಿ 40 ಎಕರೆ ಎಡೆ ಹೊಡೆದ ವಿಜಯಪುರದ ಎತ್ತುಗಳುಪ್ರೇಯಿಸಿ ಮೊಬೈಲ್‌ ನಂಬರ್‌ ಬ್ಲಾಕ್‌ಗೆ ಹಾಕಿದ್ದಕ್ಕೆ ಟವರ್ ಕುಳಿತ ಯುವಕ : ಪ್ರೇಯಸಿ ಬರುತ್ತಿದ್ದಂತೆ ಇಳಿದಅನುಮಾನಾಸ್ಪದವಾಗಿ ಯುವಕ ಸಾವು : ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಪತ್ತೆ ಪಾಕ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಇಂಗ್ಲೆAಡ್