ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ , ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ನಗರ ಪಾಲಿಕೆಗಳ ಚುನಾವಣೆಗಳನ್ನು ಡಿಸೆಂಬರ್ ಒಳಗೆ ನಡೆಸಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಅಗತ್ಯವಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮತದಾರರ ಪಟ್ಟಿಗೆ ಸಂಬಂಧಿಸಿದ SIR ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರಾಜ್ಯ ಸರ್ಕಾರವು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಿದೆ. ಬಳಿಕ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಪಾಲಿಕೆಗಳ ಚುನಾವಣೆ ನಡೆಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.


