Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸವಣೂರಿನಲ್ಲಿ ಶ್ರೀ ದಿಂಗಾಲೇಶ್ವರ ಶ್ರೀಗಳ ಪುರ ಪ್ರವೇಶ:   ಮೇ 11, 12 ರಂದು ಜಾತ್ರಾ ಮಹೋತ್ಸವ

Advertisement

ಸವಣೂರು: ಹಾವೇರಿ ಜಿಲ್ಲೆಯ ಸವಣೂರು ನಗರದ ಕೊರಿಪೇಟೆ ಓಣಿಯಲ್ಲಿರುವ ಶಿರಹಟ್ಟಿ ಶ್ರೀ ಜಗದ್ಗುರು ಫಕ್ಕೀರೇಶ್ವರ ಶಾಖಾ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ಶ್ರೀ ಜಗದ್ಗುರು ದಿಂಗಾಲೇಶ್ವರ ಸ್ವಾಮೀಜಿ ಅವರ ಪುರ ಪ್ರವೇಶವು ವಿವಿಧ ವಾದ್ಯ ವೈಭವಗಳೊಂದಿಗೆ ಅದ್ದೂರಿಯಾಗಿ ಜರುಗಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯು ಸಾಗಿ ಶಿರಹಟ್ಟಿ ಶ್ರೀ ಜಗದ್ಗುರು ಫಕ್ಕೀರೇಶ್ವರ ಶಾಖಾ ಮಠವನ್ನು ತಲುಪಿತು. ಮೇ 11 ಮತ್ತು 12 ರಂದು ಎರಡು ದಿನಗಳ ಕಾಲ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಲಿದೆ.
news_1778481667_0_507.webp

 

ಮೇ 11 ರಂದು ಕಾರ್ಯಕ್ರಮ:  
ಪ್ರಾತಃಕಾಲ ಶ್ರೀ ಜಗದ್ಗುರು ಫಕ್ಕೀರೇಶ್ವರ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಲಿವೆ. ನಂತರ ಮಹಿಳಾ ಡೊಳ್ಳು ಮೇಳ, ಕುದುರೆ ಕುಣಿತ, ಆನೆ ಅಂಬಾರಿ ಪಲ್ಲಕ್ಕಿ, ಗೊಂಬೆ ಕುಣಿತ ಸೇರಿದಂತೆ ವಿವಿಧ ವಾದ್ಯ ವೈಭವಗಳೊಂದಿಗೆ ಶ್ರೀಮಠದಿಂದ ಮೆರವಣಿಗೆ ಆರಂಭವಾಗಲಿದೆ.
news_1778481682_0_160.webp

 

ಮೆರವಣಿಗೆಯು ಕೊರಿಪೇಟೆ, ಬುಧವಾರ ಪೇಟೆ, ಶಿಂಪಿಗಲ್ಲಿ, ಉಪ್ಪಾರ ಓಣಿ, ವೀರಗಲ್ಲಿ, ಮುಖ್ಯ ಮಾರುಕಟ್ಟೆ ಸೇರಿದಂತೆ ಪಟ್ಟಣದ ರಾಜಬೀದಿಯಲ್ಲಿ ಸಂಚರಿಸಿ ಶ್ರೀಮಠದಲ್ಲಿ ಸಂಪನ್ನಗೊಳ್ಳಲಿದೆ. ಸಂಜೆ ಶ್ರೀ ಜಗದ್ಗುರು ದಿಂಗಾಲೇಶ್ವರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಅದ್ದೂರಿ ರಥೋತ್ಸವ ಜರುಗಲಿದೆ.

ಮೇ 12 ರಂದು ಕಾರ್ಯಕ್ರಮ:  
ಪ್ರಾತಃಕಾಲ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ. ನಂತರ ನಗರದ ಪ್ರಮುಖ ಬೀದಿಗಳಲ್ಲಿ ವಾದ್ಯ ವೈಭವಗಳೊಂದಿಗೆ ಪಲ್ಲಕ್ಕಿ ಉತ್ಸವ ಜರುಗಲಿದೆ. ಸಂಜೆ 6 ಗಂಟೆಗೆ ಶ್ರೀಗಳ ಸಾನ್ನಿಧ್ಯದಲ್ಲಿ "ಕಡುಬಿನ ಕಾಳಗ" ಉತ್ಸವ ವಿಶೇಷ ಆಕರ್ಷಣೆಯಾಗಿ ನಡೆಯಲಿದೆ.

ವರದಿ: ವಿಶ್ವನಾಥ ಹತ್ತಲಗೇರಿ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ