ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಎಸ್‌ಎಸ್‌ಎಲ್ಸಿ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ.
ಸ್ಥಳೀಯ ಏಜೆನ್ಸಿಗಳ ಮೂಲಕ ಅರ್ಹ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ದ್ವಿಚಕ್ರವಾಹನಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

