LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಗ್ರೀನ್ ಸಿಗ್ನಲ್ : ಸುಪ್ರೀಂಕೋರ್ಟ್ 

Advertisement

ನವದೆಹಲಿ: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿರುವ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಆಟೋ-ಟ್ಯಾಕ್ಸಿ ಸಂಘಟನೆಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನು ವಜಾಗೊಳಿಸಿದೆ.

ದ್ವಿಸದಸ್ಯ ಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ. ಈ ತೀರ್ಪಿನಿಂದ ಓಲಾ, ಉಬರ್, ರ‍್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸಂಸ್ಥೆಗಳು ಹಾಗೂ ನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರಿಗೆ ಭಾರಿ ನಿರಾಳತೆ ಸಿಕ್ಕಂತಾಗಿದ್ದು, ರಾಜ್ಯ ಸರ್ಕಾರ ಮತ್ತು ಆಟೋ-ಟ್ಯಾಕ್ಸಿ ಒಕ್ಕೂಟಗಳಿಗೆ ಹಿನ್ನಡೆಯಾಗಿದೆ.

ತೀರ್ಪಿನ ವೇಳೆ ನ್ಯಾಯಮೂರ್ತಿಗಳ ಸ್ವಾರಸ್ಯಕರ ಪ್ರಸಂಗ:

ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರು, ತಮ್ಮ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಹಾಗೂ ಬೈಕ್ ಟ್ಯಾಕ್ಸಿ ಬಳಸುವ ಯುವತಿಯರೊಂದಿಗಿನ ಸಂಭಾಷಣೆಯನ್ನು ಮೆಲುಕು ಹಾಕಿದರು.

"ನೀವು ಕಚೇರಿಗೆ ಹೇಗೆ ಬರುತ್ತೀರಿ ಎಂದು ಕೇಳಿದಾಗ, ಕ್ಯಾಬ್ ಬಾಡಿಗೆ ಭರಿಸಲು ಸಾಧ್ಯವಾಗದ ಕಾರಣ ಬೈಕ್ ಟ್ಯಾಕ್ಸಿ ಬಳಸುವುದಾಗಿ ಅವರು ತಿಳಿಸಿದ್ದರು.

 ಆಟೋದಲ್ಲಿ ಏಕೆ ಬರುವುದಿಲ್ಲ ಎಂಬ ಪ್ರಶ್ನೆಗೆ, ಆಟೋ ದರ ಐದು ಪಟ್ಟು ಹೆಚ್ಚಿರುತ್ತದೆ ಎಂದು ಉತ್ತರಿಸಿದ್ದರು" ಎಂದು ಸ್ಮರಿಸಿದ ನ್ಯಾಯಮೂರ್ತಿಗಳು, ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಸಾರಿಗೆ ಲಭ್ಯವಾಗುವುದರ ಮಹತ್ವವನ್ನು ಒತ್ತಿ ಹೇಳಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST