Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮೀಯರೇ ರೀಲ್ಸ್ ಮಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಬಹುಮಾನ ಗೆಲ್ಲಿ

Advertisement
ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ಧಿ; ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

[video width="848" height="478" mp4="https://bharathvaibhav.com/wp-content/uploads/2024/09/WhatsApp-Video-2024-09-02-at-8.32.21-AM.mp4"][/video]

ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ.
ರೀಲ್ಸ್ ಮಾಡಿ
ಸಾಮಾಜಿಕ ಜಾಲ ಜಾಲತಾಣಗಳಾದ ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಕೋರಿದ್ದಾರೆ.

ಯಾವ ಯಜಮಾನಿಯರು ಮಾಡಿದ ರೀಲ್ಸ್ ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ. ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್ ಗಳಲ್ಲಿ ಹಂಚಿಕೊಳ್ಳಬೇಕಿದೆ. ಜಾಸ್ತಿ ವಿವರ್ಸ್ ಸಿಕ್ಕಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ.

ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ; ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ