ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯನ್ನು ನಾವು ನಿಲ್ಲಿಸಲು ಹೋಗಲ್ಲ. ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿಯನ್ನು ಸಲ್ಲಿಸಬೇಕು. ಗೃಹಜ್ಯೋತಿಗೂ ಕೂಡ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಪಂ ಸಿಇಒಗಳ ಜೊತೆಗೆ ಸಭೆ ನಡೆಸಿದ ಸಿಎಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ರಾಜ್ಯದ ಜನರು ನಮ್ಮ ಮೇಲೆ ಬಹಳ ನಿರೀಕ್ಷೆಗಳನ್ನು ಇಟ್ಟಿದ್ದಾರೆ. ಕಚೇರಿಗಳಿಗೆ ಬಂದ ಜನರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಅಧಿಕಾರಿಗಳು ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹಾಜರಾಗಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಅಧಿಕಾರಿಗಳು ಕಚೇರಿಗೆ ಹಾಜರಾಗಬೇಕು. ಹಾಜರಾದ ಕೂಡಲೇ ಮೆಸೇಜ್ ಕಳಿಸಬೇಕು. ತಾಲೂಕು ಮಟ್ಟದಲ್ಲೂ ಅಧಿಕಾರಿಗಳ ಹಾಜರಾತಿ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯನ್ನು ನಾವು ನಿಲ್ಲಿಸಲು ಹೋಗುವುದಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿಯನ್ನು ಸಲ್ಲಿಸಬೇಕು. ಗೃಹಜ್ಯೋತಿಗೂ ಕೂಡ ಮತ್ತೆ ಅರ್ಜಿಯನ್ನು ಸಲ್ಲಿಸಬೇಕು ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಬೇಕು ಅಷ್ಟೇ ಎಂದು ಹೇಳಿದ್ದಾರೆ.


