ಬೆಂಗಳೂರು: ವಿಧಾನಸಭಾ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್.ಪಾಟೀಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಸ್ಪೀಕರ್ ಆಯ್ಕೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹಂಗಾಮಿ ಸ್ಪೀಕರ್ ಟಿ.ಬಿ.ಜಯಚಂದ್ರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸೂಚಿಸಿದರು.ಸ್ಪೀಕರ್ ಸ್ಥಾನಕ್ಕೆ ಸಿಎಂ ಡಿ.ಕೆ.ಶಿವಕುಮಾರ್, ಜಿ.ಎಸ್.ಪಾಟೀಲ್ ಹೆಸರಿ ಸೂಚಿಸಿದರು.
ಈ ವೇಳೆ ಸ್ಪೀಕರ್ ಆಯ್ಕೆ ಚುನಾವಣಾ ಪ್ರಕ್ರಿಯೆಯನ್ನು ಬಿಜೆಪಿ ಬಹಿಷ್ಕರಿಸಿದೆ. ಜೆಡಿಎಸ್ ಶಾಸಕರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾದರು.
ಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭಾ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು. ಈ ವೇಳೆ ಡಿಸಿಎಂ ಪರಮೇಶ್ವರ್ ನೂತನ ಸ್ಪೀಕರ್ ಜಿ.ಎಸ್.ಪಾಟೀಲ್ ಹೆಸರು ಅನುಮೋದಿಸಿದರು.


