ನ್ಯೂ ಚಂದಿಗಢ: ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಂದು ಆರ್‌ಸಿಬಿ ವಿರುದ್ಧ ಫೈನಲ್ ಆಡುವ ತಂಡ ಯಾವುದು ಎಂದು ನಿರ್ಧಾರವಾಗುವ ದಿನ.
ಇಲ್ಲಿನ ಮುಲ್ಲಾನಪುರದಲ್ಲಿರುವ ಮಹಾರಾಜ ಯಧುವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಇಂದು ಸಾಯಂಕಾಲ ೭:೩೦ ಕ್ಕೆ ಕ್ವಾಲಿಫಾಯರ್-೨ ಪಂದ್ಯ ಗುಜರಾತ್ ಟೈಟನ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ೩೧ ರಂದು ಅಹ್ಮದಾಬಾದ್‌ನಲ್ಲಿ ನಡೆಯುವ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಎದುರಿಸಲಿದೆ.
ಗುಜರಾತ್ ಟೈಟನ್ಸ್ ಆರ್‌ಸಿಬಿ ವಿರುದ್ಧ ಕ್ವಾಲಿಪಾಯರ್-೧ ರಲ್ಲಿ ಸೋತಿದ್ದು, ರಾಜಸ್ತಾನ್ ರಾಯಲ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಈ ನಿರ್ಣಾಯಕ ಪಂದ್ಯಕ್ಕೆ ಅಣಿಯಾಗಿದೆ.
ಗುಜರಾತ್ ಟೈಟನ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ಎರಡೂ ತಂಡಗಳು ಬಲಿಷ್ಠವಾಗಿದ್ದು, ವೈಭವ್ ಸೂರ್ಯವಂಶಿ ಹಾಗೂ ಸಾಯಿ ಸುದರ್ಶನ್ ಬ್ಯಾಟಿಂಗ್ ಬಲ ನೋಡಲು ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ.

