ಕಲ್ಮಠ ಪದವಿ ಮಹಾವಿದ್ಯಾಲಯದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮಪಟ್ಟಣದ ಕಲ್ಮಠ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟೀಯ ಸೇವಾ ಯೋಜನೆ ಘಟಕದ ವತಿಯಿಂದ ನಡೆದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಕಲ್ಮಠ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಉಮಾಶಂಕರ್ ಹಿರೇಮಠ ಮಾತನಾಡಿ ಒಬ್ಬ ವಿದ್ಯಾರ್ಥಿಯನ್ನು ಉತ್ತಮ ನಾಗಾರಿಕರನ್ನಾಗಿಸಿ ಜೀವನದಲ್ಲಿ ಉನ್ನತ ಸ್ಥಾನವನ್ನು ಪಡೆಯುವುದಕ್ಕೆ ಶಿಕ್ಷಣ ಸಂಸ್ಥೆಗಳಲ್ಲಿನ ಗುರುಗಳು ಮಹಾತ್ವದ ಪಾತ್ರವನ್ನು ವಹಿಸುತ್ತಾರೆ ಯಾರು ಗುರುಗಳ ಮಾರ್ಗದರ್ಶನದಲ್ಲಿ ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಂಡು. ಶಿಸ್ತಿನ ಜೀವನ ನಡೆಸಿದಲ್ಲಿ ಮಾತ್ರ ಜೀವನದಲ್ಲಿ ಗುರಿಯನ್ನು ತಲುಪುವುದಕ್ಕೆ ಸಾಧ್ಯವಾಗುತ್ತದೆ. ಎಂದು ತಿಳಿಸಿದರು.
ಕಲ್ಮಠ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಸಿದ್ದನಗೌಡ ಪಾಟೀಲ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಆನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.


